Friday, April 18, 2025
Google search engine

Homeರಾಜ್ಯಸಂವಿಧಾನ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಎಚ್ಚರಿಕೆಯಿಂದಿರಿ: ಸಿಎಂ ಸಿದ್ದರಾಮಯ್ಯ

ಸಂವಿಧಾನ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಎಚ್ಚರಿಕೆಯಿಂದಿರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನ ದಲಿತರ ಉದ್ಧಾರಕ್ಕೆ ಮತ್ತು ಅದು ಜನರ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂಬ ಅಪಪ್ರಚಾರಗಳು ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ನಾಗರಿಕರು ಇಂತಹ ಅಪಪ್ರಚಾರಗಳನ್ನು ಸಹಿಸದೆ ಸಂವಿಧಾನದ ರಕ್ಷಣೆಗೆ ಗಟ್ಟಿಯಾಗಿ ನಿಲ್ಲಬೇಕು ಎಂದು ಸಲಹೆ ನೀಡಿದ್ದಾರೆ.

ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ’ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ವಿರೋಧಿಗಳು ಈ ಅಪಪ್ರಚಾರದ ಹಿಂದೆ ಇದ್ದಾರೆ.

“ಸಂವಿಧಾನವು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸ್ಪಷ್ಟವಾಗಿ ಉಲ್ಲೇಖಿಸುತ್ತದೆ. ಜನವರಿ 26, 1950 ರಂದು ಸಂವಿಧಾನ ಜಾರಿಗೆ ಬಂದಾಗಿನಿಂದ ಇಂತಹ ಅಪಪ್ರಚಾರಗಳು ಚಾಲ್ತಿಯಲ್ಲಿದೆ, ಇದನ್ನು ಸಹಿಸಬಾರದು. ಸಂವಿಧಾನದ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ. ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ’ ಎಂದು ಎಚ್ಚರಿಸಿದರು. ಅಮೆರಿಕ ಮಾಜಿ ಅಧ್ಯಕ್ಷ ಅಬ್ರಹಾಂ ಲಿಂಕನ್ ಅವರ ಹೇಳಿಕೆಯನ್ನು ಉಲ್ಲೇಖಿಸಿದರು.

ಯಾರಿಗೆ ಅಧಿಕಾರವಿದೆ ಎನ್ನುವುದು ಮುಖ್ಯ: ದೇಶದಲ್ಲಿ ಅಸಮಾನತೆ ಹೋಗಲಾಡಿಸುವುದು ಪ್ರತಿಯೊಂದು ಸರ್ಕಾರದ ಜವಾಬ್ದಾರಿಯಾಗಿದೆ. ನಾವು ವಿರೋಧಾಭಾಸಗಳ ಯುಗವನ್ನು ಪ್ರವೇಶಿಸುತ್ತಿದ್ದೇವೆ. ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯಿರುವ ಸಮಾಜದಲ್ಲಿ, ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಯಶಸ್ವಿಯಾಗುತ್ತದೆ.

ಅಸಮಾನತೆಯಿಂದ ನರಳುವವರು ಪ್ರಜಾಪ್ರಭುತ್ವದ ಸೌಧವನ್ನು ಹಾಳು ಮಾಡುತ್ತಾರೆ ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ಸಂವಿಧಾನ ಯಶಸ್ವಿಯಾಗಬೇಕಾದರೆ ಅಧಿಕಾರ ಯಾರ ಕೈಯಲ್ಲಿದೆ ಎಂಬುದು ಮುಖ್ಯ. ಮಾನವೀಯ ಸಮಾಜ ನಿರ್ಮಾಣ ಮಾಡಬೇಕೆನ್ನುವವರ ಪರ ಇರುವವರ ಕೈಗೆ ಅಧಿಕಾರ ಸಿಕ್ಕರೆ ಯಶಸ್ಸು ಸಿಗುತ್ತದೆ ಎಂದರು.

ಸಂವಿಧಾನ ವಿರೋಧಿಗಳ ಕೈಯಲ್ಲಿದ್ದರೆ ನಮಗೆ ಉಳಿಗಾಲವಿಲ್ಲ: ಸಂವಿಧಾನದ ಅಂಗೀಕಾರದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಸಂವಿಧಾನದ ಪೀಠಿಕೆ ಮತ್ತು ಆಶಯಗಳನ್ನು ಜನರಿಗೆ ಅರ್ಥಮಾಡಿಕೊಳ್ಳಲು ಜನವರಿ 26, 2024 ರಿಂದ ರಾಜ್ಯಾದ್ಯಂತ ಸಂವಿಧಾನದ ಕುರಿತು ಜಾಗೃತಿ ‘ಜಾಥಾ’ಗಳನ್ನು ಆಯೋಜಿಸಲಾಗಿದೆ ಎಂದರು.

ಸಂವಿಧಾನದ ಕುರಿತು ಜಾಗೃತಿ ಮೂಡಿಸಲು ಉತ್ತಮ ಚಟುವಟಿಕೆಗಳನ್ನು ಹಮ್ಮಿಕೊಂಡ ತುಮಕೂರು, ದಾವಣಗೆರೆ, ಮೈಸೂರು, ಕೊಡಗು ಮತ್ತು ಬಳ್ಳಾರಿ ಜಿಲ್ಲಾಡಳಿತಗಳಿಗೆ ಸಿದ್ದರಾಮಯ್ಯ ಅವರು ಬಹುಮಾನ ಹಾಗೂ ನೆನಪಿನ ಕಾಣಿಕೆ ವಿತರಿಸಿದರು.

RELATED ARTICLES
- Advertisment -
Google search engine

Most Popular