ಮಂಡ್ಯ: ಕರ್ನಾಟಕ ಸ್ವಾಭಿಮಾನಿ ಸಮಸಮಾಜದ ವತಿಯಿಂದ ಮಂಡ್ಯದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜ.20 ರಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಹಾಗೂ ಸಾವಿತ್ರಿ ಬಾಯಿ ಫುಲೆ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.
ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ ನರಸಿಂಹಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೈಸೂರಿನ ಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಸಚಿವ ಸತೀಶ್ ಜಾರಕಿಹೋಳಿ, ಶಾಸಕ ನರೇಂದ್ರ ಸ್ವಾಮಿ, ಉದಯ್, ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ಮಂಡ್ಯದ ಸಂಜಯ್ ವೃತ್ತದಲ್ಲಿ ವಿಜಯೋತ್ಸವ ಮೆರವಣಿಗೆ ಚಾಲನೆ ದೊರೆಯಲಿದ್ದು, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುಂತೆ ಮನವಿ ಮಾಡಿದ್ದಾರೆ.