ಬೆಂಗಳೂರು: ಕರಾವಳಿ ಜನರ ಸಂಸ್ಕೃತಿಕ ಆಚರಣೆ ಕಂಬಳಕ್ಕೆ ಬೆಂಗಳೂರಿನಲ್ಲಿ ತಯಾರಿ ಶುರುವಾಗಿದೆ. ಇದೇ ಮೊದಲ ಬಾರಿಗೆ ಕರಾವಳಿ ಹೊರತುಪಡಿಸಿ ಬೆಂಗಳೂರಿನಲ್ಲಿ ಕಂಬಳ ನಡೆಯುತ್ತಿದ್ದು ಇಂದು ಅರಮನೆ ಮೈದಾನದಲ್ಲಿ ಕಂಬಳದ ಕರೆ ಪೂಜೆ (ಭೂಮಿ ಪೂಜೆ) ನೆರವೇರಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಂಬಳದ ಕರೆ ಪೂಜೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಡಿವಿ ಸದಾನಂದ ಗೌಡ, ಮಾಜಿ ಡಿಸಿಎಂ ಡಾ ಸಿಎನ್ ಅಶ್ವತ್ ನಾರಾಯಣ್, ಶಾಸಕ ಹ್ಯಾರೀಸ್, ಸಂಗೀತ ನಿರ್ದೇಶಕ ಗುರುಕಿರಣ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ತುಳುಕೂಟಕ್ಕೆ ೫೦ ವರ್ಷದ ಸಂಭ್ರಮ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಕಂಬಳ ಆಯೋಜನೆ ಮಾಡಲಾಗುತ್ತಿದ್ದು ನವೆಂಬರ್ ತಿಂಗಳ ೨೪, ೨೫, ೨೬ರಂದು ಕಂಬಳ ನನಡೆಯಲಿದೆ. ಇಂದಿನಿಂದ ಒಂದು ತಿಂಗಳ ಕಾಲ ಕಂಬಳಕ್ಕಾಗಿ ಟ್ರ್ಯಾಕ್ ಸಿದ್ದಪಡಿಸಲಾಗುತ್ತೆ. ಬೆಂಗಳೂರಿನ ಕಂಬಳ ಕಾರ್ಯಕ್ರಮಕ್ಕೆ ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಕರೆಸುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಈಗಾಗಲೇ ಕರಾವಳಿ ಮೂಲದವರಾದ ಅನುಷ್ಕಾ ಶೆಟ್ಟಿ ಆಗಮನ ಖಚಿತವಾಗಿದೆ. ಕಾಂತಾರ ಹಾಗೂ ಕಾಂತಾರ ೨ ಚಿತ್ರತಂಡ ಕೂಡ ಬರಲಿದೆ. ಸ್ಯಾಂಡಲ್ ವುಡ್ ಬಾಲಿವುಡ್ ಸೇರಿದಂತೆ ಎಲ್ಲಾ ಚಿತ್ರರಂಗದ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ.