ಮೈಸೂರು : ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಪ್ರತಿಪಕ್ಷ ಹಾಗೂ ಕಾಂಗ್ರೆಸ್ ನಾಯಕರ ಜಟಾಪಟಿ ಮುಂದುವರೆದಿದ್ದು, ಕೆಲವರ ಮಾತು ಕೇಳಿ ಯೋಜನೆ ಕೈ ಬಿಡಲು ಆಗಲ್ಲ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟೌನ್ ಶಿಫ್ ಮಾಡುವುದು ಅತ್ಯವಶ್ಯಕವಾಗಿದೆ. ಶೇ.80 ರಷ್ಟು ರೈತರು ಜಮೀನು ಕೊಡಲು ಒಪ್ಪಿದ್ದಾರೆ. ಹೆಚ್ಚಿನ ಮಟ್ಟದ ಪರಿಹಾರಕ್ಕೆ ಒಪ್ಪಿದ್ದಾರೆ,ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಜೆಡಿಎಸ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.
ಬಿಡದಿ ಟೌನ್ ಶಿಪ್ ಗೆ ಕೆಲವರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೆಲವರ ಮಾತನ್ನು ಕೇಳಿ ಯೋಜನೆ ಕೈ ಬಿಡಲು ಆಗಲ್ಲ. ಬೆಂಗಳೂರು ಜನಸಂದಣಿ ಹೆಚ್ಚಾಗಿದೆ. ಎಷ್ಟೋ ಜನರಿಗೆ ನಿವೇಶನದ ಅಗತ್ಯ ಇದೆ. ಬೆಂಗಳೂರು ಜನಸಂಖ್ಯೆ ಸ್ಪ್ರೆಡ್ ಆಗಬೇಕಿದೆ. ಬೆಂಗಳೂರು ವಿಸ್ತರಣೆಯ ಅವಶ್ಯಕತೆಯಂತೂ ಇದೆ. ರೈತರೊಂದಿಗೆ ಮಾತುಕತೆ ನಡೆಸಿ, ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ಮಾಡುತ್ತೇವೆ ಎಂದು ತಿಳಿಸಿದರು.



