ರಾಮನಗರ: ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆಯನ್ನು ನಡೆಸಲು ಘೋಷಿಸಲಾಗಿರುತ್ತದೆ.
ವಿಧಾನ ಪರಿಷತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಎಸ್ಷಾಬ್ಲಿಷ್‌ಮೆಂಟ್‌ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂವಲಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂ. ೩ರ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ವಿಜಯ್ ಕುಮಾರ್ ಎಚ್.ಬಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.