ಮೈಸೂರು : ಮೈಸೂರು ಜಿಲ್ಲೆಗೆ ಪ್ರವಾಸ ಮಾಡುತ್ತಿರುವ ಪ್ರವಾಸಿಗರಿಗೆ ಇದೀಗ ಭಾರಿ ನಿರಾಸೆಯಾಗಿದೆ. ಕಾರಣ ಮೈಸೂರು ಅರಮನೆಯಲ್ಲಿರುವ ಚಿನ್ನದ ಅಂಬಾರಿ ವೀಕ್ಷಣೆಗೆ ಇದೀಗ ತಾತ್ಕಾಲಿಕವಾಗಿ ನಿರ್ಬಂಧ ಹೇರಲಾಗಿದೆ ಹಾಗಾಗಿ ಮೈಸೂರು ಜಿಲ್ಲೆ ಪ್ರವಾಸ ಕೈಗೊಂಡವರಿಗೆ ಸಹಜವಾಗಿ ನಿರಾಸೆಯಾಗಿದೆ.
ಮೂಲಗಳ ಮಾಹಿತಿಗಳ ಪ್ರಕಾರ ಅಂಬಾರಿ ವೀಕ್ಷಣೆಗೆ ನಿರ್ಬಂಧ ಹೇರಿದ್ದು ಪ್ರವಾಸಿಗರಲ್ಲಿ ನಿರಾಸೆ ಉಂಟು ಮಾಡಿದೆ. ಅಂಬಾರಿ ಕೆಳಗೆ ಹಾಗೂ ಹಿಂಭಾಗ ಮರದ ಕೆಲಸ, ಸೇರಿದಂತೆ ವಿವಿಧ ಕಾಮಗಾರಿ ಕೆಲಸ ಇರವುದರಿಂದ ವೀಕ್ಷಣೆಗೆ ಬ್ರೇಕ್ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನದ ಅಂಬಾರಿ ವೀಕ್ಷಣೆಗೆ ಅವಕಾಶವಿಲ್ಲ. ಆದ್ದರಿಂದ ಸಹಜವಾಗಿ ಮೈಸೂರು ಅರಮನೆಗೆ ಭೇಟಿ ನೀಡುವ ಪ್ರವಾಸಿಗರಿಗೆ ನಿರಾಸೆಯಾಗಿದೆ.