Friday, July 18, 2025
Google search engine

Homeಅಪರಾಧಕಾನೂನುಕುಮಾರಸ್ವಾಮಿಗೆ ಬಿಗ್ ರಿಲೀಫ್: ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂ ತಡೆ

ಕುಮಾರಸ್ವಾಮಿಗೆ ಬಿಗ್ ರಿಲೀಫ್: ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂ ತಡೆ

ನವದೆಹಲಿ: ಬಿಡದಿ ಬಳಿ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಎಚ್​ ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾಯಾಮೂರ್ತಿ ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಮುಂದಿನ ಆದೇಶದವರೆಗೂ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶಿಸಿದೆ.

ಹಿಂದಿನ ರಾಮನಗರ ಜಿಲ್ಲೆ ಬಿಡದಿ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಮತ್ತಿತರರ ವಿರುದ್ಧದ ಭೂ ಕಬಳಿಕೆ ಆರೋಪ ಸಂಬಂಧ ಲೋಕಾಯುಕ್ತ ನೀಡಿರುವ ಆದೇಶ ಜಾರಿಗೊಳಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್‌ ಆರ್‌ ಹಿರೇಮಠ ಅವರು ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಈ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಅರ್ಜಿ ವಿಚಾರಣೆಯಲ್ಲಿ ಭಾಗವಹಿಸಲು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಗೆ ಅನುಮತಿ ನೀಡಿತ್ತು. ಆದ್ರೆ, ಹೈಕೋರ್ಟ್​ ನ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂಕೋರ್ಟ್, ಕುಮಾರಸ್ವಾಮಿ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಗೆ ತಡೆ ನೀಡಿ ಆದೇಶಿಸಿದೆ.

RELATED ARTICLES
- Advertisment -
Google search engine

Most Popular