Tuesday, April 8, 2025
Google search engine

Homeಅಪರಾಧಕಾನೂನುಸೂರಜ್ ರೇವಣ್ಣಗೆ ಬಿಗ್ ರಿಲೀಫ್​; ಅನರ್ಹತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸೂರಜ್ ರೇವಣ್ಣಗೆ ಬಿಗ್ ರಿಲೀಫ್​; ಅನರ್ಹತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ವಿರುದ್ದದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ಸೂರಜ್ ರೇವಣ್ಣ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ವಕೀಲ ದೇವರಾಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಸೂರಜ್ ರೇವಣ್ಣ ಅವರು ವಿಧಾನ ಪರಿಷತ್ ಚುನಾವಣೆಯ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸುವಾಗ ತಮ್ಮ ಬಗ್ಗೆ ಕೆಲವು ವಿಚಾರಗಳನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ದೇವರಾಜೇಗೌಡ ಅವರು ಪ್ರಕರಣ ದಾಖಲಿಸಿದ್ದರು.

ಮಾಹಿತಿಯನ್ನು ಮುಚ್ಚಿಡುವ ಮೂಲಕ ಸೂರಜ್ ಅವರು, ಕಾನೂನು ಉಲ್ಲಂಘಿಸಿದ್ದಾರೆ. ಹಾಗಾಗಿ, ಅವರನ್ನು ಅನರ್ಹಗೊಳಿಸಬೇಕು ಎಂದು ದೇವರಾಜೇಗೌಡ ಹಾಗೂ ಇತರರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

RELATED ARTICLES
- Advertisment -
Google search engine

Most Popular