Friday, April 11, 2025
Google search engine

Homeಅಪರಾಧಕಾನೂನುಚೆಕ್ ಬೌನ್ಸ್ ಕೇಸ್ ನಲ್ಲಿ ಸ್ನೇಹಮಯಿ ಕೃಷ್ಣಗೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಚೆಕ್ ಬೌನ್ಸ್ ಕೇಸ್ ನಲ್ಲಿ ಸ್ನೇಹಮಯಿ ಕೃಷ್ಣಗೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್.ಟಿ. ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಮೈಸೂರಿನ ಮೂರನೇ ಜೆ ಎಂ ಎಫ್ ಸಿ ಕೋರ್ಟ್ ಸ್ನೇಹಮಯಿ ಕೃಷ್ಣ ಅವರಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾರ್ ಎಂಬುವವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ನ ಚೆಕ್ ನೀಡಿದ್ದರು. ಕುಮಾರ್ ಅವರು ತಮ್ಮ ಬ್ಯಾಂಕ್ ಗೆ ಚೆಕ್ ಹಾಕಿದ್ದಾಗ ಬೌನ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು.

ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆ ಎಂ ಎಫ್ ಸಿ ಕೋರ್ಟ್ ಸ್ನೇಹಮಯಿ ಕೃಷ್ಣ ಅವರಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

RELATED ARTICLES
- Advertisment -
Google search engine

Most Popular