Wednesday, September 3, 2025
Google search engine

Homeರಾಜ್ಯಸುದ್ದಿಜಾಲಧರ್ಮಸ್ಥಳ ಶವ ಹೂತ ಪ್ರಕರಣದ ತನಿಖೆಗೆ ಬಿಗ್ ಟ್ವಿಸ್ಟ್: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ...

ಧರ್ಮಸ್ಥಳ ಶವ ಹೂತ ಪ್ರಕರಣದ ತನಿಖೆಗೆ ಬಿಗ್ ಟ್ವಿಸ್ಟ್: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಎಸ್‌ಐಟಿ ಬುಲಾವ್

ಮಂಗಳೂರು (ದಕ್ಷಿಣ ಕನ್ನಡ) : ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ನಡೆದಿದೆ. ಈ ಮಧ್ಯೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಎಸ್ ಐ ಟಿ ತನಿಖೆ ಆರಂಭಿಸಿದ್ಯಾ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಆರೋಪ ಹೊತ್ತವರಿಗೆ ಎಸ್ ಐ ಟಿ ಬುಲಾವ್ ನೀಡಿದ್ದು ಆರೋಪ ಹೊತ್ತ ಉದಯ್ ಕುಮಾರ್ ಜೈನ್, ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್ ಗೆ ಬುಲಾವ್ ನೀಡಿದೆ ಎನ್ನಲಾಗಿದೆ. ಈ ಬೆನ್ನಲ್ಲೇ ಇಂದು ಬೆಳಗ್ಗೆ ಎಸ್ ಐ ಟಿ ಕಚೇರಿಗೆ ಉದಯ ಕುಮಾರ್ ಜೈನ್ ಆಗಮಿಸಿದರು.

ಇದೇ ವೇಳೆ ಮಾತನಾಡಿದ ಅವರು, ಯಾವುದೇ ತನಿಖೆಗೆ ನಾವು ಸಿದ್ಧ. ಸೌಜನ್ಯ ತಾಯಿ ಕೊಟ್ಟ ಎಸ್ ಐ ಟಿಗೆ ಕೊಟ್ಟ ದೂರಿಗೆ ಕರೆದಿರಬಬಹುದು. ಚಿನ್ನಯ್ಯ ನೀಡಿದ ಹೇಳಿಕೆಯ ಕಾರಣಕ್ಕೂ ಕರೆದಿರಬಹುದು. ಬುರುಡೆ ಪ್ರಕರಣದ ದಿಕ್ಕು ಬದಲಿಸುವ ಹುನ್ನಾರ ಇದು. ಗುಂಡಿ ಎಲ್ಲಾ ತೋಡಿ ಯಾಗಿದೆ. ಈಗ ವಿಷಯಾಂತರ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಬುರುಡೆ ಪ್ರಕರಣ ಮುಚ್ಚಿ ಹಾಕಲು ಈ ಪ್ರಕರಣವನ್ನ ಮತ್ತೆ ಮುನ್ನಲೆಗೆ ತರುತ್ತಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular