Saturday, April 19, 2025
Google search engine

Homeಸ್ಥಳೀಯಕೇಂದ್ರದಿಂದ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕೇಂದ್ರದಿಂದ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ: ಸಿಎಂ ಸಿದ್ದರಾಮಯ್ಯ

ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಅತಿ ಹೆಚ್ಚು ಅನ್ಯಾಯವಾಗಿದ್ದರೆ ಅದು ಕರ್ನಾಟಕ ರಾಜ್ಯಕ್ಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ ಎಂಬ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ಸಮರ್ಥನೆಗೆ ಸೋಮವಾರ ತಿರುಗೇಟು ನೀಡಿದರು. ನೀತಿ ಆಯೋಗದ ಸಭೆಗೆ ಉದ್ದೇಶಪೂರ್ವಕವಾಗಿಯೇ ನಾನು ಹಾಜರಾಗಲಿಲ್ಲ. ಬಹಿಷ್ಕರಿಸಿದ್ದೇನೆ. ನಮ್ಮೊಂದಿಗೆ, ಬಿಜೆಪಿಯೇತರ ಸರ್ಕಾರಗಳೂ ಬಹಿಷ್ಕರಿಸಿವೆ. ರಾಜ್ಯಕ್ಕೆ ನ್ಯಾಯವೇ ಸಿಗದಿದ್ದ ಮೇಲೆ ಆ ಸಭೆಗೆ ಹೋಗಿ ಏನು ಪ್ರಯೋಜನ ಎಂದು ಕೇಳಿದರು.

ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಬಂದು ಸುಳ್ಳು ಹೇಳಿ ಹೋಗುತ್ತಾರೆ. ಈ ಬಾರಿಯೂ ಅದನ್ನೇ ಮಾಡಿದ್ದಾರೆ. ಇಲ್ಲಿಂದ ರಾಜ್ಯಸಭಾ ಸದಸ್ಯರಾಗಿರುವ ಅವರು, ಕರ್ನಾಟಕದ ಋಣ ತೀರಿಸಿಬಾರದಾ ನಾವು ಮನವಿ ಸಲ್ಲಿಸಿ ಹಲವು ಬೇಡಿಕೆಗಳ ಬಗ್ಗೆ ಪ್ರಸ್ತಾಪಿಸಿದ್ದೆವು. ಅದ್ಯಾವುದಕ್ಕೂ ಅನುದಾನವನ್ನೇ ಕೊಟ್ಟಿಲ್ಲ. ಕರ್ನಾಟಕದ ಹೆಸರನ್ನೇ ಪ್ರಸ್ತಾಪಿಸಿಲ್ಲ. ಇದು ಅನ್ಯಾಯವಲ್ಲದೇ ಮತ್ತೇನು ಎಂದು ಕೇಳಿದರು.

RELATED ARTICLES
- Advertisment -
Google search engine

Most Popular