Saturday, April 19, 2025
Google search engine

HomeUncategorizedರಾಷ್ಟ್ರೀಯಬಿಹಾರ: ನಿರ್ಮಾಣ ಹಂತದ ಸೇತುವೆ ಕುಸಿದು ಓರ್ವ ಸಾವು- ಹಲವರು ಸಿಲುಕಿರುವ ಶಂಕೆ

ಬಿಹಾರ: ನಿರ್ಮಾಣ ಹಂತದ ಸೇತುವೆ ಕುಸಿದು ಓರ್ವ ಸಾವು- ಹಲವರು ಸಿಲುಕಿರುವ ಶಂಕೆ

ಬಿಹಾರ: ಬಿಹಾರದ ಸುಪೌಲ್‌ ನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದು ಬಿದ್ದು ಓರ್ವ ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಇಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಸ್ಲ್ಯಾಬ್ ಕುಸಿದು 30 ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ಹೊರತರುವ ಕಾರ್ಯ ನಡೆಯುತ್ತಿದೆ.

ಸದ್ಯ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಬಂದಿರುವ ಮಾಹಿತಿಯ ಪ್ರಕಾರ ಈ ಸೇತುವೆಯನ್ನು ಭಾರತಮಾಲಾ ಯೋಜನೆಯಡಿ ನಿರ್ಮಿಸಲಾಗುತ್ತಿದೆ . ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕೆ ಸ್ಥಳೀಯರ ನೆರವು ಪಡೆಯಲಾಗುತ್ತಿದೆ.

ಕೋಸಿ ನದಿಗೆ ನಿರ್ಮಿಸಲಾಗುತ್ತಿದ್ದ ನಿರ್ಮಾಣ ಹಂತದ ಸೇತುವೆಯ ಸ್ಲ್ಯಾಬ್ ಕುಸಿದು ಈ ಘಟನೆ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕಳುಹಿಸಲಾಗಿದೆ.

RELATED ARTICLES
- Advertisment -
Google search engine

Most Popular