ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಯಿಂದ ನಗರದಲ್ಲಿ ಇಂದು ಬೈಕ್ ರ್‍ಯಾಲಿ ನಡೆಸಿದರು.
ಹಳೆ ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ರೈತರ ಪ್ರತಿಭಟನೆ ನೆಡೆಸಿದರು. ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದ ರೈತರು, ಸಂಕಷ್ಟಕಾಲದಲ್ಲಿ ಮಧ್ಯಪ್ರವೇಶಿಸಬೇಕಾದ ಕೇಂದ್ರ ಸರಕಾರ ಕರ್ನಾಟಕದ ವಿಚಾರದಲ್ಲಿ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ರೈತರು ಎಚ್ಚರಿಸಿದರು.
