ಬೆಂಗಳೂರು: ರಾಜಧಾನಿಯಲ್ಲಿ ಬೈಕ್ ಕಳ್ಳತನಕ್ಕಿಳಿದಿದ್ದ ಇಬ್ಬರು ಯುವಕರು ಸೇರಿದಂತೆ ಮೂವರು ಕಿಡಿಗೇಡಿಗಳನ್ನು ಪ್ರತ್ಯೇಕವಾಗಿ ವಿದ್ಯಾರಣ್ಯಪುರ ಹಾಗೂ ಪೀಣ್ಯ ಪೊಲೀಸರು ಸೆರೆ ಹಿಡಿದಿದ್ದಾರೆ.
ಹುಣಸಮಾರನಹಳ್ಳಿ ನಿವಾಸಿಗಳಾದ ರಾಘವೇಂದ್ರ, ಸಾಯಿತೇಜ ಹಾಗೂ ಮಾದಾವರದ ವೆಂಕಟೇಶ್ ಬಂಧಿತರಾಗಿದ್ದು, ಆರೋಪಿಗಳಿಂದ ೩೧ ಲಕ್ಷ ರು ಮೌಲ್ಯದ ೪೬ ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ಹಲವು ದಿನಗಳಿಂದ ನಗರದಲ್ಲಿ ಈ ಮೂವರು ಪ್ರತ್ಯೇಕವಾಗಿ ಬೈಕ್ ಕಳ್ಳತನದಲ್ಲಿ ತೊಡಗಿದ್ದರು. ಈ ಬಗ್ಗೆ ತನಿಖೆಗಿಳಿದ ವಿದ್ಯಾರಣ್ಯಪುರ ಹಾಗೂ ಪೀಣ್ಯ ಪೊಲೀಸರು, ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಆಧರಿಸಿ ಕಳ್ಳರನ್ನು ಬಂಧಿಸಿದ್ದಾರೆ.