Wednesday, September 24, 2025
Google search engine

Homeಅಪರಾಧಬಿಕ್ಲು ಶಿವ ಹತ್ಯೆ ಪ್ರಕರಣ: ಭೈರತಿ ಬಸವರಾಜು ಬಂಧನಕ್ಕೆ ಅರ್ಜಿ, ಸುಳ್ಳು ಮಾಹಿತಿ ನೀಡಿದ ಆರೋಪ

ಬಿಕ್ಲು ಶಿವ ಹತ್ಯೆ ಪ್ರಕರಣ: ಭೈರತಿ ಬಸವರಾಜು ಬಂಧನಕ್ಕೆ ಅರ್ಜಿ, ಸುಳ್ಳು ಮಾಹಿತಿ ನೀಡಿದ ಆರೋಪ

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ಬಂಧನದ ಅಗತ್ಯವಿದೆ ಎಂದು ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ಬೆಂಗಳೂರಿನಲ್ಲಿ ನಡೆದಿದ್ದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಭೈರತಿ ಬಸವರಾಜು ಸುಳ್ಳು ಮಾಹಿತಿ ನೀಡಿದ್ದಾರೆ. ಈ ಪ್ರಕರಣದಲ್ಲಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಈಗ ಭೈರತಿ ಬಸವರಾಜು ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕಾಗಿದೆ ಎಂದು ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ಭೈರತಿ ಬಸವರಾಜಗೆ ರಕ್ಷಣೆ ನೀಡಿದ ಆದೇಶ ತೆರವು ಕೋರಿ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆಯ ವೇಳೆ ಭೈರತಿ ಬಸವರಾಜ್ ಸುಳ್ಳು ಮಾಹಿತಿ ನೀಡಿದ್ದಾರೆ. ಈ ಪ್ರಕರಣದಲ್ಲಿ ಹಲವು ಸಾಕ್ಷಿಗಳನ್ನು ಸಂಗ್ರಹಿಸಲಾಗಿದೆ. ಈಗ ಭೈರತಿ ಬಸವರಾಜು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕಿದೆ ಎಂದು ಪ್ರಾಜಿಕ್ಯೂಷನ್ ಪರವಾಗಿ ಎಸ್‍ಪಿಪಿ ಬಿ.ಎನ್ ಜಗದೀಶ್ ವಾದ ಮಂಡಿಸಿದರು.

RELATED ARTICLES
- Advertisment -
Google search engine

Most Popular