ನವದೆಹಲಿ: ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳನ್ನು ಅವಧಿಪೂರ್ವವಾಗಿ ಬಿಡುಗಡೆಗೊಳಿಸಿ ಗುಜರಾತ್ ಸರ್ಕಾರ ಹೊರಡಿಸಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಸೋಮವಾರ (ಜನವರಿ 08)ರದ್ದುಗೊಳಿಸಿದೆ.
ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳನ್ನು ಅವಧಿಪೂರ್ವವಾಗಿ ಬಿಡುಗಡೆಗೊಳಿಸಿರುವ ಗುಜರಾತ್ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮನವಿಯನ್ನು ಜಸ್ಟೀಸ್ ಬಿ.ವಿ.ನಾಗರತ್ನಾ ಮತ್ತು ಜಸ್ಟೀಸ್ ಉಜ್ಜಾಲ್ ಭುವನ್ ಅವರನ್ನೊಳಗೊಂಡ ಪೀಠ ಈ ತೀರ್ಪನ್ನು ನೀಡಿರುವುದಾಗಿ ವರದಿ ತಿಳಿಸಿದೆ.