ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಯಾಗಿರುವಂತ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಶ್ರೀಧರ್ ಪೂಜಾರ್‌ಗೆ ಬಿಗ್ ರಿಲೀಫ್ ನೀಡಿದೆ.
ಇಂದು ಗುರುವಾರ ಹೈಕೋರ್ಟ್ ನಲ್ಲಿ ಶ್ರೀಧರ್ ಪೂಜಾರ್ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಮೂರ್ತಿ ಎಂ ಜಿ ಉಮಾ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು. ನ್ಯಾಯಪೀಠದ ಮುಂದೆ ಶ್ರೀಧರ್ ಪೂಜಾರ್ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ವಾದಿಸಿದರು. ಒಂದೇ ಕೇಸ್ ನಲ್ಲಿ ಎರಡು ಎರಡು ಬಾರಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ೪ ವರ್ಷಗಳ ಬಳಿಕ ಬಂಧಿಸೋದಕ್ಕೆ ಯತ್ನಿಸಲಾಗಿದೆ ಎಂಬುದಾಗಿ ವಾದಿಸಿದರು.
ಈ ವಾದದ ಬಳಿಕ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ ಉಮಾ ಅವರು ಪೊಲೀಸರ ಕ್ರಮಕ್ಕೆ ಅಸಮಾಧಾನ ವ್ಯಕ್ತ ಪಡಿಸಿದರು. ಅಲ್ಲದೇ ಜನರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸುವಂತಿದೆ ಅಂತ ಹೇಳುವ ಮೂಲಕ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರು.