Wednesday, April 23, 2025
Google search engine

Homeಅಪರಾಧಬಿಟ್ ಕಾಯಿನ್ ಹಗರಣ: ವಿಚಾರಣೆಗೆ ಗೈರಾದ ಪ್ರಮುಖ ಆರೋಪಿ ಶ್ರೀಕಿ ಬಂಧನ

ಬಿಟ್ ಕಾಯಿನ್ ಹಗರಣ: ವಿಚಾರಣೆಗೆ ಗೈರಾದ ಪ್ರಮುಖ ಆರೋಪಿ ಶ್ರೀಕಿ ಬಂಧನ

ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಬಿಟ್ ಕಾಯಿನ್ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿಗೆ ಹಲವು ಬಾರಿ ನೋಟಿಸ್ ಕಳುಹಿಸಿದ್ದರು. ಆದರೆ, ಆರೋಪಿ ವಿಚಾರಣೆಗೆ ಹಾಜರಾಗದೇ, ತನಗೆ ಹುಷಾರಿಲ್ಲ, ತನ್ನ ತಾಯಿ-ತಂದೆಗೆ ಹುಷಾರಿಲ್ಲ ಎಂಬ ಕಾರಣಗಳನ್ನು ನೀಡುತ್ತಿದ್ದನು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿಯನ್ನು ಬಂಧಿಸಿದ್ದಾರೆ. ಮೇ ೭ರಂದು ಸಂಜೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಆತನನ್ನು ವಶಕ್ಕೆ ಪಡೆಯಲು ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ.

೨೦೧೫ರಲ್ಲಿ ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಈ ಕೇಸ್ ತನಿಖೆ ವೇಳೆ ಬಿಟ್‌ಕಾಯಿನ್ ಹಗರಣ ಬೆಳಕಿಗೆ ಬಂದಿತ್ತು. ೨೦೧೭ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ಯುನೋ ಕಾಯಿನ್ ಕಳವು ಪ್ರಕರಣ ದಾಖಲಾಗಿತ್ತು. ಯೂನೋಕಾಯಿನ್ ಟೆಕ್ನಾಲಜೀಸ್ ಕಂಪನಿಯ ಸಹ ಸಂಸ್ಥಾಪಕ ಬಿ.ವಿ.ಹರೀಶ್ ಎಂಬವರು ಶ್ರೀಕಿ ವಿರುದ್ಧ ದೂರು ನೀಡಿದ್ದರು.

ಶ್ರೀಕಿ ಕಳೆದ ಐದಾರು ವರ್ಷಗಳಿಂದ ನಾನಾ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್‌ಫಾರ್ಮ್‌ಗಳನ್ನು ಹ್ಯಾಕ್ ಮಾಡಿದ್ದನು. ಅವುಗಳಿಂದ ಸಾವಿರಾರು ಬಿಟ್‌ಕಾಯಿನ್‌ಗಳನ್ನು ಕದ್ದಿದ್ದನು ಎಂದು ತಿಳಿದುಬಂದಿದೆ. ಅಲ್ಲದೇ, ರಾಜ್ಯ ಸರ್ಕಾರದ ಇ-ಸಂಗ್ರಹಣಾ ಪೋರ್ಟಲ್? ಜಾಲತಾಣ ಹ್ಯಾಕ್ ಮಾಡಿದ್ದನು.

RELATED ARTICLES
- Advertisment -
Google search engine

Most Popular