ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ 72,573 ಮತಗಳ ಮುನ್ನಡೆ ಪಡೆದಿದ್ದಾರೆ. ಮತ ಎಣಿಕೆ ಪ್ರಾರಂಭದಿಂದಲೂ ಸೋಮಣ್ಣ ಮುನ್ನಡೆ ಸಾಧಿಸಿದ್ದಾರೆ.
ಸೋಮಣ್ಣ 2,79,392 ಮತ ಪಡೆದಿದ್ದು, ಮುದ್ದ ಹನುಮೇಗೌಡ 2,06,819 ಮತ ಪಡೆದಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದಿಂದ ಈ ಬಾರಿ 22 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಆದರೆ, 4 ಜನರು ನಾಮಪತ್ರ ವಾಪಾಸ್ ಪಡೆದಿದ್ದರು. ಅಂತಿಮವಾಗಿ 18 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಆದರೆ, ಬಿಜೆಪಿಯ ವಿ. ಸೋಮಣ್ಣ ಹಾಗೂ ಕಾಂಗ್ರೆಸ್ನ ಎಸ್ಪಿ ಮುದ್ದಹನುಮೇಗೌಡ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.