ಗಾಂಧಿನಗರ: ಕೇಂದ್ರ ಗೃಹಸಚಿವ ಅಮಿತ್ ಶಾ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ಹೆಜ್ಜೆ ಇರಿಸಿದ್ದಾರೆ. ಮಧ್ಯಾಹ್ನ ೧೨ ಗಂಟೆಯ ಟ್ರೆಂಡ್ ಪ್ರಕಾರ, ಅಮಿತ್ ಶಾ ೨ ಲಕ್ಷಕ್ಕೂ ಮತಗಳ ಮುನ್ನಡೆಯಲ್ಲಿದ್ದಾರೆ. ಇಂದು ಗುಜರಾತಿನ ೨೬ರ ಪೈಕಿ ೨೫ ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದೆ. ಸೂರತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಿಲೇಶ್ ಕುಂಭಾನಿ ನಾಮಪತ್ರ ತಿರಸ್ಕೃತವಾದ ಹಿನ್ನೆಲೆ ಬಿಜೆಪಿಯ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗಾಂಧಿನಗರ ಲೋಕಸಭಾ ಕ್ಷೇತ್ರದ ಮೊದಲ ಸುತ್ತಿನಿಂದಲೂ ಅಮಿತ್ ಶಾ ಮುನ್ನಡೆ ಕಾಯ್ದುಕೊಂಡು ಬಂದಿದ್ರು.