Friday, April 11, 2025
Google search engine

Homeರಾಜ್ಯವಿಶ್ವಾಸ ಗಳಿಸುವಲ್ಲಿ ಬಿಜೆಪಿ ವಿಫಲ, ಶಾಸಕರ ಖರೀದಿ: ಸಿಎಂ ಸಿದ್ದರಾಮಯ್ಯ ಲೇವಡಿ

ವಿಶ್ವಾಸ ಗಳಿಸುವಲ್ಲಿ ಬಿಜೆಪಿ ವಿಫಲ, ಶಾಸಕರ ಖರೀದಿ: ಸಿಎಂ ಸಿದ್ದರಾಮಯ್ಯ ಲೇವಡಿ

ವಿಜಯಪುರ: ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ವಿಫಲವಾದ ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಖರೀದಿಸಿ ಬಹುಮತ ಪಡೆದುಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಶುಕ್ರವಾರ ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಜನರ ವಿಶ್ವಾಸ ಹಾಗೂ ತೀರ್ಪಿನಂತೆ ಅಧಿಕಾರಕ್ಕೆ ಬಂದಿದೆ. ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬರುತ್ತಾರೆ. ರಾಜ್ಯದಲ್ಲಿ ಜನರು ಬಿಜೆಪಿಗೆ ಜನ ಪೂರ್ಣ ಅಧಿಕಾರ ಕೊಟ್ಟೇ ಇಲ್ಲ. ೨೦೦೮, ೨೦೧೩, ೨೦೧೮ ರಲ್ಲಿ ಅವರು ಬಹುಮತದಿಂದ ಗೆದ್ದೇಇಲ್ಲ. ಕಾಂಗ್ರೆಸ್ ಪಕ್ಷ ೨೦೧೩ರಲ್ಲಿ ಗದ್ದಿದೆ. ೨೦೧೮ ರಲ್ಲಿ ಸೋತು ಪುನಃ ೨೦೨೩ ರಲ್ಲಿ ೧೩೬ ಸ್ಥಾನಗಳನ್ನು ಪಡೆದು ಗೆದ್ದಿದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ಸಿನಿಂದ ಹಲವಾರು ನಾಯಕರು ದುಂಬಾಲು ಬಿದ್ದಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಹಿಂದೆಯೂ ಎರಡು ಬಾರಿ ಹಾಗೇ ಮಾಡಿದ್ದಾರೆ. ೨೦೦೮ ರಿಂದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಇದ್ದಾಗಲೂ ಇದನ್ನೇ ಮಾಡಿದ್ದು. ಎಲ್ಲಾ ಕಡೆ ಕೊಂಡುಕೊಳ್ಳಲು ಪ್ರಯತ್ನ ಮಾಡುತ್ತಾರೆ. ಕೊಂಡುಕೊಳ್ಳಲು ಜನ ಸಿಕ್ಕರೆ ಸರಕಾರ ರಚನೆ ಮಾಡುತ್ತಾರೆ ಎಂದರು.

RELATED ARTICLES
- Advertisment -
Google search engine

Most Popular