Sunday, April 20, 2025
Google search engine

Homeರಾಜ್ಯಪರಿಷತ್ ಚುನಾವಣೆಗೆ 3 ಅಭ್ಯರ್ಥಿಗಳನ್ನು ಪ್ರಕಟಿಸಿದ ಬಿಜೆಪಿ

ಪರಿಷತ್ ಚುನಾವಣೆಗೆ 3 ಅಭ್ಯರ್ಥಿಗಳನ್ನು ಪ್ರಕಟಿಸಿದ ಬಿಜೆಪಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಮೂರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಮಾಜಿ ಸಚಿವ ಸಿ.ಟಿ. ರವಿಗೆ ಪರಿಷತ್ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಅವಕಾಶ ಸಿಕ್ಕಿಲ್ಲ. ಇದರಿಂದ ಅವರಿಗೆ ನಿರಾಶೆಯಾಗಿದೆ. ಅದೇ ರೀತಿ ಕಳೆದ ಅವಧಿಯಲ್ಲಿ ಸಕ್ರಿಯವಾಗಿದ್ದ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ನಲ್ಲಿ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರಿಗೆ ಮತ್ತೊಮ್ಮೆ ಅವಕಾಶ ದೊರೆತಿದೆ. ಬೀದರ್ ಮೂಲದ ಹಿರಿಯ ನಾಯಕ ಎಂ.ಜಿ.ಮುಳೆ ಅವರ ಹೆಸರನ್ನೂ ಪ್ರಕಟಿಸಲಾಗಿದೆ.

RELATED ARTICLES
- Advertisment -
Google search engine

Most Popular