Sunday, April 20, 2025
Google search engine

Homeರಾಜಕೀಯಬಿಜೆಪಿ - ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಸ್ವಾಗತ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬಿಜೆಪಿ – ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಸ್ವಾಗತ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಬಿಜೆಪಿ – ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಸ್ವಾಗತಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲೆಕ್ಷನ್ ಯಾವ ರೀತಿ ಮಾಡಬೇಕು ಎಂಬುದು ನಮಗೆ ಗೊತ್ತಿದೆ. ಜನರ ಆಶೋತ್ತರಗಳೇನು ಎಂಬ ಬಗ್ಗೆಯೂ ಗೊತ್ತು. ಅವುಗಳನ್ನೆಲ್ಲ ಈಡೇರಿಸುತ್ತಿದ್ದು, ಒಳ್ಳೆಯ ರೀತಿಯಿಂದ ಸರ್ಕಾರ ನಡೆಸುತ್ತಿದ್ದೇವೆ. ಹಾಗಾಗಿ ಅವರು ಮೈತ್ರಿ ಮಾಡಿಕೊಂಡರೆ ನಾವು ಸ್ವಾಗತಿಸುತ್ತೇವೆ ಎಂದರು.

ಬಿಜೆಪಿ-ಜೆಡಿಎಸ್‌ನವರು ಕಾಂಗ್ರೆಸ್‌ಗೆ ಸೇರ್ಪಡೆ ಆಗುತ್ತಿರುವ ಭಯದಿಂದ ಮೈತ್ರಿ ಮಾಡಿಕೊಳ್ಳುತ್ತಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರ ಯಾರು ಕಾಂಗ್ರೆಸ್‌ಗೆ ಬರುತ್ತಿದ್ದಾರೆ ಮತ್ತು ಯಾರಿಗೆ ಭಯ ಇದೆ ಅಂತಾನೂ ನನಗೆ ಗೊತ್ತಿಲ್ಲ ಎಂದರು. ಬೆಳಗಾವಿ ಲೋಕಸಭೆಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ಅಂತೆ ಕಂತೆಗಳಿಗೆ ನಾನು ಉತ್ತರ ಕೊಡುವುದಿಲ್ಲ ಎಂದರು. ಹೈಕಮಾಂಡ್ ಮತ್ತು ಬೆಳಗಾವಿ ಜಿಲ್ಲೆಯ ನಾಯಕರಿದ್ದಾರೆ. ಕುಳಿತುಕೊಂಡು ಚರ್ಚೆ ಮಾಡಿ ಬಳಿಕ ಯಾರು ಅಭ್ಯರ್ಥಿ ಆಗಬೇಕೆಂದು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ನಗರದ ಪಶು ಆಸ್ಪತ್ರೆಯ ಆವರಣದಲ್ಲಿರುವ ರೈತ ಭವನದಲ್ಲಿ ಆಯೋಜಿಸಿದ್ದ ಪಶು ಸಖಿಯರಿಗೆ ತರಬೇತಿ ಕಾರ್ಯಾಗಾರದಲ್ಲಿ ಪ್ರಥಮ ಚಿಕಿತ್ಸಾ ಕಿಟ್ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು ಪಶು ಸಾಕಾಣಿಕೆ ಮಾಡುವವರಿಗೆ ಸರಿಯಾಗಿ ಮತ್ತು ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ ಎನ್ನುವ ಕಾರಣಕ್ಕೆ ಪಶು ಸಖಿಯರು ಎನ್ನುವ ಹೊಸ ಪರಿಕಲ್ಪನೆಯನ್ನು ರೂಪಿಸಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

RELATED ARTICLES
- Advertisment -
Google search engine

Most Popular