Saturday, December 20, 2025
Google search engine

Homeರಾಜ್ಯಸುದ್ದಿಜಾಲ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ  ಬಿಜೆಪಿ ಕಾಯಕರ್ತೆ

 ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ  ಬಿಜೆಪಿ ಕಾಯಕರ್ತೆ

ಕಲಬುರಗಿ: ಬಿಜೆಪಿ ಕಾಯಕರ್ತೆಯೊಬ್ಬರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ ನಂದಿಕೂರ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್ (35) ಎಂದು ಗುರುತಿಸಲಾಗಿದೆ. ನಂದಿಕೂರ ಗ್ರಾಮದ ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ್ ಎಂಬವರ ಮನೆಗೆ ತೆರಳಿ, ಜ್ಯೋತಿ ಪಾಟೀಲ್ ಬಾಗಿಲು ತಟ್ಟಿದ್ದರು. ಬಾಗಿಲು ತೆರೆಯುತ್ತಿದ್ದಂತೆ ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ವೇಳೆ ಮಲ್ಲಿನಾಥ್ ಬಿರಾದಾರ್ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.

ಮಲ್ಲಿನಾಥ್ ಬಿರಾದಾರ್ ಪತ್ನಿ ಮೂರು ಜನ ಮಕ್ಕಳು ಆ ಮನೆಯಲ್ಲಿ ವಾಸವಾಗಿದ್ದರು. ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular