Saturday, April 19, 2025
Google search engine

Homeಅಪರಾಧಬಿಹಾರದಲ್ಲಿ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ : ದುಷ್ಕರ್ಮಿಗಳು ಪರಾರಿ

ಬಿಹಾರದಲ್ಲಿ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ : ದುಷ್ಕರ್ಮಿಗಳು ಪರಾರಿ

ಪಾಟ್ನಾ: ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದಿದೆ. ಮೃತರನ್ನು ಬಿಜೆಪಿ ಬಜರಂಗಪುರಿ ಮಂಡಲದ ಮಾಜಿ ಪ್ರಧಾನ ಕಾರ್ಯದರ್ಶಿ ಅಜಯ್ ಶಾ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಪಾಟ್ನಾದ ಅಲಮ್ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಬಜರಂಗಪುರಿ ಕಾಲುವೆ ಬಳಿ ಬಿಜೆಪಿ ನಾಯಕ ಮತ್ತು ಡೈರಿ ಬೂತ್ ಆಪರೇಟರ್ ೫೦ ವರ್ಷದ ಶಾ ಎಂಬುವವರನ್ನು ದುಷ್ಕರ್ಮಿಗಳು ರಾತ್ರಿ ೧೦ ಗಂಟೆ ಸುಮಾರಿಗೆ ಗುಂಡಿಕ್ಕಿ ಕೊಂದಿದ್ದಾರೆ. ಆತನನ್ನು ಕೊಂದ ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಕೊಲೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಘಟನೆ ಬಳಿಕ ಸ್ಥಳಕ್ಕಾಗಮಿಸಿದ ಪಾಟ್ನಾ ಸಿಟಿ ಎಎಸ್ಪಿ ಶರತ್ ಆರ್.ಎಸ್, ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular