ನವದೆಹಲಿ: ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ. ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿತು. ಹೊಂದಾಣಿ ರಾಜಕಾರಣದಿಂದಲೇ ಬಿಜೆಪಿ ಸೋತಿದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಸ್ವ ಪಕ್ಷದ ನಾಯಕರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ದಾಣಿಕೆ ರಾಜಕಾರಣ ಮಾಡಿಕೊಳ್ಳದಿದ್ದರೆ ಇವತ್ತು ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಪಠ್ಯ ಪುಸ್ತಕ ಮರು ಪರಿಷ್ಕರಣೆ ಮಾಡುವ ಬಗ್ಗೆ ಮತ್ತು ಆರ್ ಎಸ್ ಎ ಸ್ ಸಂಸ್ಥಾಪಕ ಹೆಡಗೇವಾರ್ ಅವರ ಕುರಿತ ಮಾಹಿತಿ ಕೈಬಿಡುವ ಬಗ್ಗೆ ಪ್ರತಿಕ್ರಿಯಿಸಿದ ಸಿಟಿ ರವಿ, ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು, ಆದರೆ ಆರ್ ಎಸ್ ಎಸ್ ನಾಯಕರದ್ದು ಬೇಡವೇ ಎಂದು ಪ್ರಶ್ನಿಸಿದ್ದಾರೆ.
ಇವರ ನೆರವು ಇಲ್ಲದೆ ಸಂಘದ ಶಾಖೆಯ ಮೂಲಕವೇ ವಿಚಾರ ಬೆಳೆಯಲಿದೆ. ಪಠ್ಯದಿಂದ ಹೊರಹಾಕಬಹುದಷ್ಟೇ ವಿನಃ ಹೃದಯದಿಂದ ಹೊರಹಾಕಲು ಸಾಧ್ಯವಿಲ್ಲ. ನೆಹರು, ಇಂದಿರಾ ಈ ಬಗ್ಗೆ ಪ್ರಯತ್ನ ಮಾಡಿ ಸೋತಿದ್ದಾರೆ. ಸುಳ್ಳು ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು. ಕಾಂಗ್ರೆಸ್ ನಾಯಕರು ಕುರ್ಚಿಗೆ ಅಂಗಲಾಚಿದ್ದರು. ಕಾಂಗ್ರೆಸ್ ನವರನ್ನು ಯಾಕೆ ಅಂಡಮಾನ್ ಜೈಲಿಗೆ ಹಾಕಲಿಲ್ಲ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.
ಚಕ್ರವರ್ತಿ ಸೂಲಿಬೆಲೆಗೆ ಬೆಂಗಲಿಗರು ತುಂಬಾ ಜನರು ಇದ್ದಾರೆ. ದೇಶಭಕ್ತಿಯ ಕಾರಣಕ್ಕೆ ಸೂಲಿಬೆಲೆ ಪ್ರಖ್ಯಾತರಾಗಿದ್ದಾರೆ. ಅವರ ಪ್ರಖ್ಯಾತಿ ಕುಗ್ಗಿಸೋಕೆ ಆಗಲ್ಲ. ಕಾಂಗ್ರೆಸ್ ನವರು ಮತ್ಸರ, ದ್ವೇಷ ಹೊರಹಾಕುತ್ತಿದ್ದಾರೆ. ಅಧಿಕಾರದ ಮದವನ್ನು ಜನರು ಇಳಿಸುತ್ತಾರೆ ಎಂದು ಸಿಟಿ ರವಿ ಹೇಳಿದ್ದಾರೆ.