ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಹುದ್ದೆಗೆ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಭಾನುವಾರ ನಾಮಪತ್ರ ಸಲ್ಲಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವನಕುಳೆ, ಚಂದ್ರಕಾಂತ ಪಾಟೀಲ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.
ಈ ಹುದ್ದೆಗೆ ಯಾವುದೇ ಅಭ್ಯರ್ಥಿಯ ಹೆಸರನ್ನು ಮಹಾವಿಕಾಸ್ ಅಘಾಡಿ ಇನ್ನೂ ಪ್ರಕಟಿಸಿಲ್ಲ. ಡಿಸೆಂಬರ್ 9 ರಂದು ಮಧ್ಯಾಹ್ನ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಇದಕ್ಕೆ ತಯಾರಿ ಶುರುವಾಗಿದೆ.