Monday, April 21, 2025
Google search engine

Homeಸ್ಥಳೀಯಬಿಜೆಪಿ ಎಂಎಲ್‌ಎ ಟಿಕೆಟ್ ವಂಚನೆ: ೧೮೫ ಕೋಟಿ ರೂ. ವ್ಯವಹಾರ ಆಗಿದೆ; ಕೆಪಿಸಿಸಿ ವಕ್ತಾರ ಎಂ...

ಬಿಜೆಪಿ ಎಂಎಲ್‌ಎ ಟಿಕೆಟ್ ವಂಚನೆ: ೧೮೫ ಕೋಟಿ ರೂ. ವ್ಯವಹಾರ ಆಗಿದೆ; ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ

ಮೈಸೂರು : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಪಕ್ರರಣಕ್ಕೆ ಸಂಬಂಧಿಸಿದಂತೆ ಇವರ ಹಿಂದೆ ಇರುವ ಗುಂಪು ಯಾವುದು, ಎಷ್ಟು ಹಣ ಪಡೆದಿದ್ದಾರೆ, ಯಾರಿಗೆ ಕೊಟ್ಟಿದ್ದಾರೆ ಎಂಬುವುದರ ಬಗ್ಗೆ ಇನ್ನೂ ಎರಡು ದಿನದಲ್ಲಿ ಪೋಲೀಸರು ತಿಳಿಸುತ್ತಾರೆ. ಒಟ್ಟು ೧೭ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದಾರೆ. ೨೩ ಜನಕ್ಕೆ ಟಿಕೆಟ್ ಕೊಡಿಸಿ ಅವರಿಂದ ಹಣ ಪಡೆದಿದ್ದಾರೆ. ೪೦ ಜನರು ಈ ಟಿಕೆಟ್ ಪಡೆಯುವ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. ೧೮೫ ಕೋಟಿಯ ವ್ಯವಹಾರ ಇಲ್ಲಿ ಆಗಿದೆ. ಟಿಕೆಟ್ ನೀಡಿ ಕೋಟ್ಯಾಂತರ ಹಣ ಪಡೆಯಲಾಗಿದೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಣ್ಮಣ ಬಹಿರಂಗಪಡಿಸಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮೈಸೂರು ಭಾಗದಲ್ಲೂ ಇಬ್ಬರು ಹಣ ಕೊಟ್ಟು ಮೋಸಹೋಗಿದ್ದಾರೆ. ೯ ಜನರ ತಂಡದಿಂದ ಮೋಸದ ಎಸಗಲಾಗಿದೆ. ಇವರೆಲ್ಲಾ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಕಾರ್ಯಕರ್ತರು. ಬಿಜೆಪಿ ಹರಿಶ್ಚಂದ್ರನ ಮೊಮ್ಮಕ್ಕಳು ಅನ್ನುತ್ತಾರೆ. ಇವರ ಯೋಗ್ಯತೆ ಏನು ಅನ್ನೋದು ಬಹಿರಂಗಪಡಿಸಬೇಕು ಎಂದು ವಾಗ್ದಾಳಿ ಮಾಡಿದರು.

ಚೈತ್ರಾ ಕುಂದಾಪುರಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆ ನೇರ ಸಂಪರ್ಕವಿದೆ. ಮಾಜಿ ಸಚಿವ ಸಿ.ಟಿ ರವಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಚಿಂತಕ ಚಕ್ರವರ್ತಿ ಸೂಲಿಬೆಲೆ ಜೊತೆ ಈಕೆಯ ಸಂಬಂಧ ಏನು ಅನ್ನೋದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಪಿಎಸ್‌ಐ ಹಗರಣಕ್ಕೂ ಚೈತ್ರಾಗೂ ಸಂಬಂಧವಿದೆಯಾ ಎಂಬುವುದರ ಬಗ್ಗೆ ತನಿಖೆಯಾಗಬೇಕು. ಚೈತ್ರಾ ಕುಂದಾಪುರ ಪಿಎಸ್‌ಐ ಸೇರಿದಂತೆ ನಾಲ್ಕಕ್ಕೂ ಹೆಚ್ಚು ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದೆ. ಚೈತ್ರಾ ಕುಂದಾಪುರಗೆ ಜೈಲಿನಲ್ಲಿರುವ ಕೆಲವರ ಸಂಪರ್ಕ ಇದೆ. ಈ ಬಗ್ಗೆ ನಮ್ಮ ಸರ್ಕಾರ ಪ್ರಾಮಾಣಿಕ ತನಿಖೆ ಮಾಡಿಸುತ್ತದೆ ಎಂದರು.

RELATED ARTICLES
- Advertisment -
Google search engine

Most Popular