ಮಂಡ್ಯ: ತುರ್ತು ಪರಿಸ್ಥಿತಿ ಹೇರಿದ್ದನ್ನು ಖಂಡಿಸಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಬಿಜೆಪಿ ಪ್ರತಿಭಟನೆ ನಡೆಸಿದೆ.
70ರ ದಶಕದಲ್ಲಿ ಸಂವಿಧಾನ ವಿರೋಧಿ ನಡೆ ತೋರಿ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ನಡೆಗೆ ಖಂಡಿಸಿ ಮಂಡ್ಯದ ಬಂದೀಗೌಡ ಬಡಾವಣೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಕಾಂಗ್ರೆಸ್ ಕಚೇರಿ ಬಳಿ ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನ ಪೊಲೀಸರು ತಡೆದಿದ್ದಾರೆ.
ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಸೇರಿ ಹಲವರು ಭಾಗಿಯಾಗಿದ್ದರು.
ಪ್ರತಿಭಟನಾಕಾರರ ಬಂಧನ
ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.