ಮಂಗಳೂರು(ದಕ್ಷಿಣ ಕನ್ನಡ): ರಾಜ್ಯ ಸರ್ಕಾರದ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ ನಡೆಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ರಾಜ್ಯ ಸರಕಾರದ ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು, ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.