Friday, April 18, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಗುರುವಾರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಲಾಯಿತು.ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಕರೆಯನ್ವಯ ಪ್ರತಿಭಟನೆ ನಡೆಯಿತು.ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು.

ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಮೂಡ ಸೈಟ್‌ಗಳನ್ನು ಕೊಳ್ಳೆ ಹೊಡೆದ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಸಿದ್ದರಾಮಯ್ಯ ಅವರೇ ಕೊಡಲೇಬೇಕು ಕೊಡಲೇಬೇಕು- ರಾಜೀನಾಮೆ ಕೊಡಲೇಬೇಕು, ಭ್ರಷ್ಟ ಸರಕಾರ ನಡೆಸುವ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ, ಬೆಲೆ ಏರಿಕೆ, ತೆರಿಗೆ ಏರಿಕೆ ಸಿಎಂ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಧಿಕ್ಕಾರ- ಇವೇ ಮೊದಲಾದ ಘೋಷಣೆಗಳನ್ನು ಕೂಗಿದರು.

ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಘೋಷಣೆಗಳನ್ನು ಕಾರ್ಯಕರ್ತರಿಗೆ ತಿಳಿಸಿದರು ಹಾಗೂ ಕಾರ್ಯಕ್ರಮ ನಿರೂಪಿಸಿದರು. ಭಾರತ್ ಮಾತಾ ಕೀ ಜೈ ಘೋಷಣೆಯನ್ನೂ ಕೂಗಲಾಯಿತು. ಬಿಜೆಪಿ ಪ್ರಮುಖರು ಮಾತನಾಡಿ, ಹಗರಣಗಳ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕು. ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರಕಾರ ಇದೆಂದು ಟೀಕಿಸಿದರು.

RELATED ARTICLES
- Advertisment -
Google search engine

Most Popular