Thursday, April 3, 2025
Google search engine

Homeರಾಜ್ಯ18 ಶಾಸಕರ ಅಮಾನತನ್ನು ಕೂಡಲೇ ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

18 ಶಾಸಕರ ಅಮಾನತನ್ನು ಕೂಡಲೇ ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಸ್ಪೀಕರ್ ಅವರು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ.

ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿದ ಕ್ರಮವನ್ನು ಖಂಡಿಸಿ ಬೆಂಗಳೂರಿನ ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಇಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯ 18 ಶಾಸಕರ ಅಮಾನತು ಕ್ರಮ ಸಂವಿಧಾನಬಾಹಿರ ಎಂದು ಆಕ್ಷೇಪಿಸಿದರು.ಜನಪ್ರತಿನಿಧಿಯನ್ನು 6 ತಿಂಗಳ ಕಾಲ ಅಮಾನತು ಮಾಡಿ, ವಿಧಾನಸೌಧದ ಮೊಗಸಾಲೆಗೂ ಬರಬಾರದೆಂದು ಆದೇಶ ಮಾಡಿದ್ದಾರೆ. ಸ್ಪೀಕರ್ ಅವರು ಖಂಡಿತವಾಗಿ ಆಡಳಿತ ಪಕ್ಷದ ಕೈಗೊಂಬೆಯಾಗಿ ಹಾಗೂ ಮುಖ್ಯಮಂತ್ರಿಗಳನ್ನು ತೃಪ್ತಿಪಡಿಸಲು ಕಾನೂನು ಬಾಹಿರವಾಗಿ ಹಾಗೂ ಸಂವಿಧಾನಕ್ಕೆ ವಿರುದ್ಧವಾಗಿ ಈ ರೀತಿ ಆದೇಶ ಮಾಡಿದ್ದಾರೆ ಎಂದು ಟೀಕಿಸಿದರು.

ಅಮಾನತು ಹಿಂಪಡೆಯುವುದಾಗಿ ಹೇಳಿಕೆ ನೀಡಿದ್ದ ಸ್ಪೀಕರ್ ಅವರು ಯಾತಕ್ಕೋಸ್ಕರ ಕಾಯುತ್ತಿದ್ದಾರೆ ಎಂದು ಪ್ರಶ್ನಿಸಿದರು. ತಮ್ಮ ನಿರ್ಣಯ ಸಂವಿಧಾನವಿರೋಧಿ ಎಂಬುದು ಸ್ಪೀಕರ್ ಅವರಿಗೂ ಅರ್ಥವಾಗಿದೆ. ಆದರೂ ಕೂಡ ಆಡಳಿತ ಪಕ್ಷದ ಒತ್ತಡಕ್ಕೆ ಮಣಿದು ಸ್ಪೀಕರ್ ಅವರು ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇದು ಮತದಾರರಿಗೆ ಮಾಡಿದ ಅವಮಾನ ಎಂದರಲ್ಲದೆ, 18 ಶಾಸಕರ ಅಮಾನತನ್ನು ತಕ್ಷಣ ಹಿಂದಕ್ಕೆ ಪಡೆಯಲು ಆಗ್ರಹಿಸಿದರು. ಅಮಾನತು ಹಿಂಪಡೆಯುವ ವರೆಗೆ ಬಿಜೆಪಿಯ ಶಾಸಕರು ಕಮಿಟಿ ಮೀಟಿಂಗ್‍ನಲ್ಲಿ ಭಾಗವಹಿಸುವುದಿಲ್ಲ ಎಂದು ಪಕ್ಷದ ನಿರ್ಧಾರವನ್ನು ತಿಳಿಸಿದರು.

RELATED ARTICLES
- Advertisment -
Google search engine

Most Popular