ಮಂಡ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಂಡ್ಯದ ಡಿಸಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಿಸಾನ್ ಸಮ್ಮಾನ್ ಯೋಜನೆಯ 4 ಸಾವಿರ ಅನುದಾನವನ್ನು ಸರ್ಕಾರ ತಡೆಹಿಡಿದಿದೆ. ಎಪಿಎಂಸಿ ಕಾಯ್ದೆ ವಾಪಸ್ ಪಡೆದಿದ್ದಾರೆ. ರಾಜ್ಯ ಸರ್ಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ತಕ್ಷಣವೇ ರೈತಪರವಾದ ಯೋಜನೆ ಜಾರಿ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.