Thursday, April 10, 2025
Google search engine

Homeರಾಜ್ಯಡ್ಯಾಂ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು: ಸಚಿವ ಪ್ರಿಯಾಂಕ್ ಖರ್ಗೆ

ಡ್ಯಾಂ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಬಿಜೆಪಿಯವರು ಡ್ಯಾಂ ವಿಚಾರದಲ್ಲಿ ರಾಜಕೀಯ ಬೆರಸಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಗ್ರಹಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಣೆಕಟ್ಟು ಬಹಳ ಹಳೆಯದಾಗಿ ಕ್ರಸ್ಟ್ ಗೇಟ್ ಕಳಚಿರಬಹುದು, ಬಿಜೆಪಿಯವರು ತಮ್ಮ ಆಡಳಿತ ಅವಧಿಯಲ್ಲಿ ಎಷ್ಟು ಡ್ಯಾಂಗಳ ಸ್ಟ್ರೆಂತ್ ಪರಿಶೀಲಿಸಿದ್ದಾರೆ, ಅದರ ದಾಖಲೆ ಕೊಡಲಿ ಎಂದರು. ಅವರ ವರದಿಯನ್ನು ನಾವು ನಿರ್ಲಕ್ಷ್ಯ ಮಾಡಿದ್ದರೆ ಆರೋಪ ಮಾಡಲಿ ಎಂದು ತಿರುಗೇಟು ನೀಡಿದ್ದಾರೆ.

ರಾಜ್ಯದ ಎಲ್ಲಾ ಡ್ಯಾಂಗಳ ಸ್ಟ್ರೆಂತ್ ಬಗ್ಗೆ ಪರೀಶಿಲನೆ ಮಾಡುತ್ತೇವೆ. ಮುಡಾ ಕೇಸ್ ನಲ್ಲಿ ಸ್ಪಷ್ಟವಾಗಿ ರಾಜಕೀಯ ದುರುದ್ದೇಶವಿದೆ. ರಾಜ್ಯಪಾಲರ ಕಚೇರಿಯನ್ನ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಸೇರಿ ರಾಜ್ಯಪಾಲರ ಕಚೇರಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular