ಮಂಡ್ಯ: ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ, ನಾಳಿನ ಬೆಂಗಳೂರು ಬಂದ್ ಗೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಶಾಸಕ ಬಿ ವೈ ವಿಜಯೇಂದ್ರ ತಿಳಿಸಿದರು.
ನಗರದಲ್ಲಿಂದು ಮಾತನಾಡಿದ ಅವರು, ರೈತರು ನಿರಂತರವಾಗಿ ಕಾವೇರಿ ಹೋರಾಟ ಮಾಡ್ತಿದ್ದಾರೆ. ಇಷ್ಟಾದ್ರು ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಬಿಜೆಪಿ ಪಕ್ಷ ಕಾವೇರಿ ವಿಚಾರವನ್ನ ಗಂಭೀರವಾಗಿ ತೆಗೆದುಕೊಂಡು ಹೋರಾಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದರು.
ರಾಜ್ಯ ಸರ್ಕಾರ ಕಾಂಗ್ರೆಸ್ ನವರು ಅಧಿಕಾರಕ್ಕೆ ಬರುವ ಮುನ್ನ ಪಾದಯಾತ್ರೆ ಮಾಡಿದ್ರು. ಮೇಕೆದಾಟು ಪಾದಯಾತ್ರೆ ಮಾಡಿದ್ತು. ಅಧಿಕಾರಕ್ಕೆ ಬಂದ ಮೇಲೆ ರೈತರ ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲ. ನಾವು ರೈತರ ಹೋರಾಟಕ್ಕೆ ನಾವು ಬೆಂಬಲ ಕೊಟ್ಟು ಅವರ ಪರ ಇರ್ತೇವೆ. ರೈತರ ಬಗ್ಗೆ ಕಳಾಜಿ ಇಲ್ಲ, ಸುಪ್ರೀಂ ಕೋರ್ಟ್ ನಲ್ಲಿ ವಾದ ಮಾಡುವಲ್ಲಿ ವಿಫಲ. ತಮಿಳುನಾಡಿನ ಅಧಿಕಾರಿಗಳು ದೆಹಲಿಯಲ್ಲಿ ಸಭೆಯಲ್ಲಿ ಭಾಗವಹಿಸುತ್ತಾರೆ ಎಂದರು.
ನಮ್ಮ ರಾಜ್ಯದವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗ್ತಾರೆ. ಕಾವೇರಿ ಹೋರಾಟವನ್ನು ಮೇಲ್ನೋಟಕ್ಕೆ ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಹರಿಹಾಯ್ದರು.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ರೈತ ಹಿತರಕ್ಷಣಾ ಸಮಿತಿ ಧರಣಿಯಲ್ಲಿ ಭಾಗಿಯಾದ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದಕ್ಕೆ ಪ್ರತಿಭಟನಾನಿರತ ರೈತರು ಆಕ್ರೋಶ ವ್ಯಕ್ತಪಡಿಸಿದರು.