ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದನ್ನು ವಿರೋಧಿಸಿ ಜನವರಿ 17 ರಂದು ಬಳ್ಳಾರಿಯಲ್ಲಿ ಬೃಹತ್ ರ್ಯಾಲಿಯನ್ನು ಬಿಜೆಪಿ ಆಯೋಜಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತಿಂಗಳ ಆರಂಭದಲ್ಲಿ ಬಳ್ಳಾರಿಯಲ್ಲಿ ಶಾಸಕರಾದ ಭರತ್ ರೆಡ್ಡಿ ಮತ್ತು ಜಿ.ಜನಾರ್ದನ ರೆಡ್ಡಿ ಅವರ ಗುಂಪುಗಳ ನಡುವಿನ ರಾಜಕೀಯ ಘರ್ಷಣೆಯಲ್ಲಿ ರಾಜಶೇಖರ ಎಂಬ ಕಾರ್ಯಕರ್ತರ ಹತ್ಯೆಯಾಗಿತ್ತು ಈ ವಿಚಾರದಲ್ಲಿ ಸರ್ಕಾರ ಒಂದು ನಿರ್ಧಾರಕ್ಕೆ ಬರದೆ ಇದ್ದದ್ದು ಹಾಗೂ ರಾಜಕೀಯವಾಗಿ ಸ್ವರೂಪಗೊಂಡ ಈ ಗಲಭೆಯ ನಿರ್ಧಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ಹಾಗೂ ಬಳ್ಳಾರಿಯಲ್ಲಿ ಸರ್ಕಾರದ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಕಾಂಗ್ರೆಸ್ ಶಾಸಕರೊಬ್ಬರು ತಮ್ಮ ಗೂಂಡಾಗಿರಿಯಿಂದ ಭಯದ ವಾತಾವರಣವನ್ನು ಸೃಷ್ಟಿಸಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.
ಅಲ್ಲದೆ ಈ ವೇಳೆ ಯಲ್ಲಾಪುರದಲ್ಲಿ ದಲಿತ ಮಹಿಳೆಯ ಹತ್ಯೆ ಮತ್ತು ಸುಳ್ಯದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ನ್ನು ಸಹ ಅವರು ಉಲ್ಲೇಖಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಈ ನಿಟ್ಟಿನಲ್ಲಿ ಬಿಜೆಪಿ ರ್ಯಾಲಿ ಹಮ್ಮಿಕೊಂಡಿದ್ದು, ಜನವರಿ 17 ರಂದು, ಪಕ್ಷದ ಎಲ್ಲಾ ಹಿರಿಯ ನಾಯಕರು ಮತ್ತು ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಹೇಳಿದರು.



