ಬಾಗಲಕೋಟೆ: ಚಂದ್ರಯಾನ-3 ರ ಯಶಸ್ಸಿಗಾಗಿ “ಭಜರಂಗಿ”ಗೆ ಬಾಗಲಕೋಟೆ ನಗರದ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹಳೇ ಬಾಗಲಕೋಟೆ ನಗರದ ಹೊಳೆ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯ ಯಶಸ್ಸಿಗೆ ಪ್ರಾರ್ಥನೆ. ಸಲ್ಲಿಸಲಾಗಿದೆ.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜುನಾಯ್ಕರ್ ಹಾಗೂ ಪಕ್ಷದ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ ಬಳಿಕ ದೇಶದ ಪರವಾಗಿ ಘೋಷಣೆ ಕೂಗಿ ಶುಭಹಾರೈಸಿದ್ದಾರೆ.
