ಬೆಂಗಳೂರು: ಮುಡಾ ಮತ್ತು ವಾಲ್ಮೀಕಿ ಹಗರಣ ಸಂಬಂಧ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿರುವುದು ದಡ್ಡತನ ಸದನದಲ್ಲಿ ಚರ್ಚೆಗೆ ಅವಕಾಶ ನೀಡಿ, ಉತ್ತರ ಕೊಟ್ಟು, ಸಿಎಂ ಈಗಾಗಲೇ ಎಸ್‌ಐಟಿ ತನಿಖೆಗೆ ಆದೇಶ ಮಾಡಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಐದು ವರ್ಷ ಅಧಿಕಾರವಿರುತ್ತದೆ. ಬೈ ಎಲೆಕ್ಷನ್ ಗಳಲ್ಲಿ ಏನೇನಾಗಿದೆ ಎಲ್ಲರಿಗೂ ಗೊತ್ತಿದೆ. ಬಿಜೆಪಿಗೆ ಯಾವತ್ತೂ ಬಹುಮತ ಬಂದಿಲ್ಲ. ಹೀಗೆಯೇ ಅವರು ಅಧಿಕಾರಕ್ಕೆ ಬಂದಿದ್ದಾರೆ. ತಿಪ್ಪರಲಾಗ ಹಾಕಿದ್ರು ಬಿಜೆಪಿ ಸರ್ಕಾರ ಅಸ್ಥಿರಗೊಳಿಸಲಾಗುವುದಿಲ್ಲ. ಬಿಜೆಪಿಗೆ ಅದೊಂದು ಕೆಟ್ಟ ಚಾಳಿ ಇದೆ ಎಂದರು.
ಮುಡಾ ಕೇಸ್, ವಾಲ್ಮೀಕಿ ಕೇಸ್ ಬಗ್ಗೆ ಚರ್ಚೆ ಆಗಿದೆ. ಸಿಎಂ ಈಗಾಗಲೇ ತನಿಖೆಗೆ ಆದೇಶ ಮಾಡಿದ್ದಾರೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.