Friday, April 4, 2025
Google search engine

Homeರಾಜ್ಯಸುದ್ದಿಜಾಲಬಿಜೆಪಿಯ ಜನಪರ ಅಭಿವೃದ್ಧಿ ಕಾರ್ಯಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಗೆಲುವಿಗೆ ಸಹಕಾರಿ-ಪಿ.ಪ್ರಶಾಂತ್ ಗೌಡ

ಬಿಜೆಪಿಯ ಜನಪರ ಅಭಿವೃದ್ಧಿ ಕಾರ್ಯಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಗೆಲುವಿಗೆ ಸಹಕಾರಿ-ಪಿ.ಪ್ರಶಾಂತ್ ಗೌಡ

ಪಿರಿಯಾಪಟ್ಟಣ: ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ಪ್ರತಾಪ್ ಸಿಂಹ ಅವರ ಜನಪರ ಅಭಿವೃದ್ಧಿ ಕಾರ್ಯಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಕಲ್ಪವೃಕ್ಷ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಪ್ರಶಾಂತ್ ಗೌಡ ತಿಳಿಸಿದರು.

ಪಟ್ಟಣದಲ್ಲಿ ಮಾತನಾಡಿದ ಅವರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರೊಂದಿಗೆ ಕ್ಷೇತ್ರದ ಹಲವೆಡೆ ಪ್ರವಾಸ ಕೈಗೊಂಡ ಸಂದರ್ಭ ಮತದಾರರಿಂದ ಸಿಕ್ಕ ಉತ್ತಮ ಪ್ರತಿಕ್ರಿಯೆ ಕ್ಷೇತ್ರದಾದ್ಯಂತ ಇದ್ದು, ಮತ್ತೊಮ್ಮೆ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವು ಸುಲಭವಾಗಿದೆ.

ಕಳೆದ ಎರಡು ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಮೂಲಕ ಇಡೀ ವಿಶ್ವವೇ ದೇಶದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಅಂತೆಯೆ ಕೇಂದ್ರ ಸರ್ಕಾರ ಅನುದಾನ ಬಳಕೆಯಲ್ಲಿ ಪ್ರತಾಪ್ ಸಿಂಹ ಅವರು ಮೊದಲ ಸ್ಥಾನದಲ್ಲಿದ್ದು ಮೈಸೂರು ಕೊಡಗು ಕ್ಷೇತ್ರದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಜೊತೆ ವೈಯಕ್ತಿಕ ಶ್ರಮದ ಮೂಲಕ ಹಲವಾರು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅಭಿವೃದ್ಧಿಯ ಹರಿಕಾರರಾಗಿದ್ದಾರೆ.

ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಎನ್ ಡಿಎ ಸದೃಢ ಸರ್ಕಾರ ರಚಿಸಬೇಕೆಂಬ ಆಸೆ ಪ್ರತಿಯೊಬ್ಬ ಮತದಾರರ ಮನದಾಳದಲ್ಲಿದ್ದು ಜನಪರ ಕೆಲಸ ಮಾಡಬೇಕೆಂಬ ನಿಟ್ಟಿನಲ್ಲಿ ರಾಜಕೀಯಕ್ಕೆ ಪಾದರ್ಪಣೆ ಮಾಡಿರುವ ಯದುವೀರ್ ಒಡೆಯರ್ ಅವರ ಗೆಲುವಿಗೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಬೂತ್ ಮಟ್ಟದಿಂದ ಸಂಘಟಿತರಾಗಿ ಅತಿ ಹೆಚ್ಚು ಅಂತರದಿಂದ ಅಭ್ಯರ್ಥಿ ಗೆಲ್ಲಿಸಲು ಕೋರಿದರು.

RELATED ARTICLES
- Advertisment -
Google search engine

Most Popular