Tuesday, January 20, 2026
Google search engine

Homeರಾಜ್ಯಅಯೋಧ್ಯೆಯಲ್ಲಿ ಬಿಜೆಪಿಗೆ ಹಿನ್ನಡೆ

ಅಯೋಧ್ಯೆಯಲ್ಲಿ ಬಿಜೆಪಿಗೆ ಹಿನ್ನಡೆ

ನವದೆಹಲಿ: ಸದ್ಯದ ಮಾಹಿತಿಯಂತೆ ಸಮಾಜವಾದಿ ಪಕ್ಷವು ೩೪ ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ ಎಂಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಸದ್ಯ ೩೫ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಗಿಂತ ಹಿನ್ನಡೆ ಅನುಭವಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಲ್ಲಿ ೨೩,೬೩೫ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಅಯೋಧ್ಯೆ

ದೇಶದಲ್ಲಿಯೇ ಅತಿ ಹೆಚ್ಚು (೮೦) ಕ್ಷೇತ್ರಗಳನ್ನು ಹೊಂದಿರುವ ರಾಜ್ಯ ಉತ್ತರ ಪ್ರದೇಶ. ಇಲ್ಲಿ ಗೆದ್ದವರು ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿಯುತ್ತಾರೆ ಎಂದೇ ಹೇಳಲಾಗುತ್ತದೆ. ೨೦೧೯ರ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ೬೨ ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ, ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಕಳೆದುಕೊಂಡಂತಾಗಿದೆ.

RELATED ARTICLES
- Advertisment -
Google search engine

Most Popular