Sunday, April 20, 2025
Google search engine

Homeರಾಜ್ಯಪ್ರಧಾನಿ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ

ಪ್ರಧಾನಿ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಶಾಸಕರ ಭವನದಲ್ಲಿ ಇಂದು  ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಹಾಗೂ ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಮಂಡಲ ಸಹಯೋಗದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಸಪ್ತಾಹ ಅಂಗವಾಗಿ ಇಂದು ರಕ್ತದಾನ ಮಾಡಿ ಜೀವ ಉಳಿಸಿ  ಎಂಬ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಗೋಪಾಲಯ್ಯ ರವರು ಪಾಲ್ಗೊಂಡು ರಕ್ತದಾನ ಶಿಬಿರಕ್ಕೆ  ಚಾಲನೆ ನೀಡಿದರು.

ಇವತ್ತು  ಹಮ್ಮಿಕೊಂಡಿರುವ ಈ  ಮಹತ್ತರವಾದ ರಕ್ತ ದಾನ ಶಿಬಿರ  ಇನ್ನೊಬ್ಬರ ಜೀವ ಉಳಿಸುವ ನಿಟ್ಟಿನಲ್ಲಿ ಮಹಾದಾನ ಕಾರ್ಯಕ್ರಮ ಆಗಿದ್ದು, ಇಂತಹ ಒಳ್ಳೆಯ ಕೆಲಸಗಳನ್ನು ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ಗಳಾದ ನರೇಂದ್ರ ಮೋದಿಯವರು ಹಾಗೂ ಬಿಜೆಪಿ ಪಕ್ಷವು ಆಯೋಜನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಕ್ಷೇತ್ರದ ಎಲ್ಲ ಮುಖಂಡರುಗಳು ಕಾರ್ಯ ಕರ್ತರು ಈ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿ ಮಾನವೀಯತೆ ಮೇರೆಯಿರಿ ಎಂದು ಕರೆ ನೀಡಿದರು.

ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್ ನಿಧಿಗೆ ಹಸ್ತಾಂತರ ಮಾಡುವ ಮೂಲಕ ಮೋದಿಜೀ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಲವು ಮುಖಂಡರುಗಳು ಕಾರ್ಯ ಕರ್ತರು ಭಾಗವಹಿಸಿ ರಕ್ತದಾನ ಮಾಡಿದರು.

RELATED ARTICLES
- Advertisment -
Google search engine

Most Popular