ಚಾಮರಾಜನಗರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ರೋಟರಿ ಸಿಲ್ಕ್ ಸಿಟಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಭಾರತ್ ಸೈಟ್ಸ್ ಅಂಡ್ ಗೈಡ್ಸ್ ಮತ್ತು ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆಯನ್ನು ಜೂನ್ ೧೪ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ನಾಳೆ ಜೂ.೧೪ ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಿಂದ ಜಾಥಾ ಆರಂಭವಾಗಿ ರೋಟರಿ ಭವನದವರೆಗೆ ಸಾಗಲಿದೆ. ಬಳಿಕ ಬೆಳಿಗ್ಗೆ ೧೦ ಗಂಟೆಗೆ ರೋಟರಿ ಭವನದಲ್ಲಿ ಸಮಾರಂಭ ಹಾಗೂ ರಕ್ತದಾನ ಶಿಬಿರ ನಡೆಯಲಿದ್ದು, ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.