Saturday, July 11, 2026
Google search engine

Homeವಿದೇಶವಿಯೆಟ್ನಾಂನಲ್ಲಿ ದೋಣಿ ದುರಂತ : 15 ಭಾರತೀಯ ಪ್ರವಾಸಿಗರ ಸಾವು, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ವಿಯೆಟ್ನಾಂನಲ್ಲಿ ದೋಣಿ ದುರಂತ : 15 ಭಾರತೀಯ ಪ್ರವಾಸಿಗರ ಸಾವು, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಹನೋಯಿ : ವಿಯೆಟ್ನಾಂನ ಜನಪ್ರಿಯ ಪ್ರವಾಸಿ ತಾಣವಾದ ಫು ಕ್ವೋಕ್ ದ್ವೀಪದ ಬಳಿ ಸಂಭವಿಸಿದ ದೋಣಿ ದುರಂತದಲ್ಲಿ ಸುಮಾರು 15 ಮಂದಿ ಭಾರತೀಯ ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭಾರತೀಯ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ದೋಣಿ ಸಮುದ್ರದಲ್ಲಿ ಮಗುಚಿ ಬಿದ್ದಿದ್ದು, ಘಟನೆಯ ಬಳಿಕ ಕರಾವಳಿ ಪ್ರದೇಶದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ.

ವಿಯೆಟ್ನಾಂನಲ್ಲಿರುವ ಭಾರತೀಯ ರಾಯಭಾರ ಕಚೇರಿ ಘಟನೆ ದೃಢಪಡಿಸಿದ್ದು, ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯದಲ್ಲಿ ರಕ್ಷಣಾ ಕಾರ್ಯ ನಡೆಸಲಾಗುತ್ತಿದ್ದು, ರಾಯಭಾರ ಕಚೇರಿ ಮಾಹಿತಿ ಪ್ರಕಾರ, ದೋಣಿಯಲ್ಲಿ ಒಟ್ಟು 36 ಮಂದಿ ಇದ್ದರು. ಇದರಲ್ಲಿ 32 ಭಾರತೀಯ ಪ್ರವಾಸಿಗರು, ಮೂವರು ಸಿಬ್ಬಂದಿ ಹಾಗೂ ಒಬ್ಬ ಸಹಾಯಕ ಸೇರಿದ್ದರು. ದುರಂತದಲ್ಲಿ 21 ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಇನ್ನೂ ಹೊನ್ ಮೇ ರುಟ್ ನ್ಗೋಯ್ ದ್ವೀಪದಿಂದ ಆನ್ ಥೋಯ್ ಬಂದರಿಗೆ ತೆರಳುತ್ತಿದ್ದ ವೇಳೆ ಬಿರುಗಾಳಿಯ ಪರಿಣಾಮ ದೋಣಿ ಪಲ್ಟಿಯಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಘಟನೆಗೆ ಸಂಬಂಧಿಸಿದಂತೆ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿ, ನಿಖರ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಹಾಗೂ ಸಂತ್ರಸ್ತರ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸಲಾಗುತ್ತಿದೆ ಎಂದು ತಿಳಿಸಿದೆ.

ಸಂತ್ರಸ್ತರಿಗೆ ನೆರವಾಗಲು ಹೋ ಚಿ ಮಿನ್ಹ್ ನಗರದಲ್ಲಿರುವ ಭಾರತೀಯ ದೂತಾವಾಸ ಮತ್ತು ಹನೋಯ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದೆ. ಫು ಕ್ವೋಕ್ ದ್ವೀಪವು ಥೈಲ್ಯಾಂಡ್ ಕೊಲ್ಲಿಯಲ್ಲಿರುವ ಪ್ರಮುಖ ಪ್ರವಾಸಿ ಕೇಂದ್ರವಾಗಿದ್ದು, ಬಿಳಿ ಮರಳಿನ ಕಡಲತೀರಗಳು ಹಾಗೂ ರೆಸಾರ್ಟ್‌ಗಳಿಗೆ ಹೆಸರುವಾಸಿಯಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಭಾರತೀಯ ಪ್ರವಾಸಿಗರ ಭೇಟಿ ಕೂಡ ಹೆಚ್ಚಾಗಿದೆ.

RELATED ARTICLES
- Advertisment -
Google search engine

Most Popular