ವಿಜಯಪುರ: ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೆ ಬಾಯ್ಲರ್ ಸ್ಫೋಟಗೊಂಡಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರೋ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಘಟನೆ ನಡೆದಿದೆ.
ಅದೃಷ್ಟವಶಾತ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಸುಕಿನ ಜಾವ ಟೀ ಕುಡಿಯಲು 15 ಕಾರ್ಮಿಕರು ತೆರಳಿದ್ದ ವೇಳೆ ಬಾಯ್ಲರ್ ಬ್ಲಾಸ್ಟ್ ಆಗಿದೆ. ಕೂದಲೆಳೆ ಅಂತರದಲ್ಲಿ ಕಾರ್ಮಿಕರು ಪಾರಾಗಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.
ಮುಂದಿನ ಅವಧಿಗೆ ಕಬ್ಬು ನುರಿಸಲು ಕಾರ್ಖಾನೆ ಸಿದ್ದತೆ ಮಾಡುವ ವೇಳೆ ಬಾಯ್ಲರ್ ಬ್ಲಾಸ್ಟ್ ಆಗಿದೆ. ಈ ಹಿಂದೆ 2023 ರ ಮಾರ್ಚ್ 4 ರಂದು ಕೂಡ ಬಾಯ್ಲರ್ ಬ್ಲಾಸ್ಟ್ ಆಗಿತ್ತು.
ಈ ವೇಳೆ ಓರ್ವ ಕಾರ್ಮಿಕ ಮೃತಪಟ್ಟು ಇತರೇ ನಾಲ್ವರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದವು. ಕಳಪೆ ಬಾಯ್ಲರ್ ನಿರ್ಮಾಣವೇ ಅವಘಢಕ್ಕೆ ಕಾರಣವೆಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.