Friday, April 18, 2025
Google search engine

Homeರಾಜ್ಯಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ

ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಆಗಿರೋ ಮಂಗಳೂರಿನ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಪ್ ಸೇರಿದಂತೆ ಸುನೀಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆತಿಯಾ ಶೆಟ್ಟಿ, ಹಾಗೂ ಸ್ಟಾರ್ ಕ್ರಿಕೆಟರ್ ಕೆ.ಎಲ್.ರಾಹುಲ್ ಭೇಟಿ ನೀಡಿದ್ರು.

ಕಾರಣಿಕ ಕ್ಷೇತ್ರವಾಗಿರುವ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಈಗಾಗಲೇ ಹಲವಾರು ಸೆಲೆಬ್ರಿಟಿಗಳು ಬಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಇದೀಗ ಬಾಲಿವುಡ್ ತಂಡವೇ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದೆ.

ತುಳುನಾಡಿನವರೇ ಆಗಿರುವ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರ, ಪುತ್ರಿ, ಅಳಿಯನ ಜೊತೆ ಖ್ಯಾತ ನಟಿ ಕತ್ರಿನಾ ಕೈಫ್ ಕೊರಗಜ್ಜನ ಸನ್ನಿಧಿಗೆ ಆಗಮಿಸಿ ಕೋಲದಲ್ಲಿ ಭಾಗವಹಿಸಿದ್ದಾರೆ.

ರಾತ್ರಿ ಕುತ್ತಾರು ಕೊರಗಜ್ಜನ ಕ್ಷೇತ್ರದಲ್ಲಿ ನಡೆದ ಹರಕೆ ಕೋಲದಲ್ಲಿ ಬಾಲಿವುಡ್ ನಟ ನಟಿಯರು ಭಾಗವಹಿಸಿದ್ದಾರೆ. ಹಲವು ನಟ ನಟಿಯರು ಕ್ಷೇತ್ರಕ್ಕೆ ಆಗಮಿಸಿ ಕೊರಗಜ್ಜನ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ರಾತ್ರಿ ನಡೆದ ಕೋಲದಲ್ಲಿ ಪುರುಷರಿಗಷ್ಟೇ ಅವಕಾಶ ಇದ್ದ ಕಾರಣ ಮಹಿಳೆಯರು ಹೊರ ಬಂದಿದ್ದಾರೆ. ಈ ವೇಳೆ ಕ್ಷೇತ್ರದ ಕಚೇರಿಯಲ್ಲಿ ಕತ್ರಿನಾ ಕೈಫ್ ಕಾಣಿಸಿಕೊಂಡಿದ್ದಾರೆ.

ಹಿಂದಿನಿಂದಲೂ ಕೊರಗಜ್ಜನ ಕ್ಷೇತ್ರದಲ್ಲಿ ಚಿತ್ರೀಕರಣಕ್ಕೆ ಅವಕಾಶ ಇಲ್ಲ. ಆದರೂ ಸೆಲೆಬ್ರಿಟಿಗಳು ಬಂದಾಗ ಕ್ಷೇತ್ರದ ದ್ವಾರದ ಮುಂಭಾಗ ಹಾಗೂ ಕಚೇರಿ ಒಳಗೆ ಇದಕ್ಕೆ ಅವಕಾಶ ನೀಡಲಾಗುತ್ತಿತ್ತು. ಆದ್ರೆ, ಇಂದು ಬಾಲಿವುಡ್ ನ ದೊಡ್ಡ ತಂಡವೇ ಆಗಮಿಸಿದ ಕಾರಣದಿಂದ ಯಾರಿಗೂ ಫೋಟೋ ವೀಡಿಯೋಕ್ಕೆ ಅವಕಾಶವನ್ನು ನೀಡಿಲ್ಲ. ಇದರ ನಡುವೆಯೂ ಕ್ಷೇತ್ರದಲ್ಲಿದ್ದ ಕತ್ರಿನಾ ಕೈಫ್ ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ

RELATED ARTICLES
- Advertisment -
Google search engine

Most Popular