ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರು ದೌಡಾಯಿಸಿದ್ದಾರೆ.
ವಿಮಾನ ನಿಲ್ದಾಣದ ಎಲ್ಲ ಸ್ಥಳಗಳಲ್ಲಿ ಮತ್ತು ಪ್ರಯಾಣಿಕರ ಬ್ಯಾಗ್ಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆದಾದ ಬಳಿಕವೂ ಕೆಲವು ಬಾರಿ ಹುಸಿ ಬಾಂಬ್ ದಾಳಿ ಕರೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.