Monday, April 21, 2025
Google search engine

Homeರಾಜಕೀಯಬೊಮ್ಮಾಯಿ ಅವರದ್ದು ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೊಮ್ಮಾಯಿ ಅವರದ್ದು ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆಯನ್ನು ಬಸವರಾಜ ಬೊಮ್ಮಾಯಿ ನೀಡುತ್ತಿದ್ದಾರೆ. ನೀರು ಬಿಡಲು ನಾವು ತಯಾರಿಲ್ಲ. ಹೀಗಾಗಿ ಕಾನೂನು ಹೋರಾಟ ನಡೆಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀರು ಬಿಡುಗಡೆ ಮಾಡದೆ ಕಾನೂನು ಹೋರಾಟ ನಡೆಸಬೇಕು ಎಂಬ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿ, ಬೊಮ್ಮಾಯಿ ಅವರ ಕಾಲದಲ್ಲಿ ಎಷ್ಟು ನೀರು ಬಿಟ್ಟಿದ್ದರು ಎನ್ನುವ ದಾಖಲೆಗಳು ನಮ್ಮ ಬಳಿ ಇವೆ. ಆದರೆ ಸುಪ್ರೀಂ ಕೋರ್ಟ್ ಅನ್ನೂ ನಾವು ಗಮನದಲ್ಲಿ ಇರಿಸಿಕೊಳ್ಳಬೇಕಾಗುತ್ತದೆ. ನೀರು ಬಿಡಬೇಡಿ ಎಂದು ಬೊಮ್ಮಾಯಿ ಹೇಳುತ್ತಾರೆ. ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದರೆ, ಬೊಮ್ಮಾಯಿ ಹಾಗೂ ನನ್ನ ಬಳಿ ಯಾವ ಆಯ್ಕೆ ಇದೆ ಎಂದರು.

ಬೊಮ್ಮಾಯಿ ಕೂಡಲೇ ಈ ವಿಚಾರದಲ್ಲಿ ಪ್ರಧಾನಿಗಳಿಗೆ ಮಧ್ಯಸ್ತಿಕೆ ವಹಿಸುವಂತೆ ಒತ್ತಡ ತರಲಿ. ನೀರು ನಿರ್ವಹಣಾ ಸಮಿತಿಗೂ ಮನವಿ ಸಲ್ಲಿಸಲಿ. ರಾಜ್ಯದ ಹಿತವನ್ನು ಅವರು ಮೊದಲು ಕಾಪಾಡಲಿ, ರಾಜಕಾರಣ ಬದಿಗಿಡಲಿ. ನಾನು ಶೀಘ್ರದಲ್ಲೇ ದೆಹಲಿಗೆ ಹೋಗಲಿದ್ದು, ಸಂಸದರನ್ನು ಭೇಟಿ ಮಾಡಿ ಮನವಿ ಮಾಡಲಿದ್ದೇನೆ. ಮಧ್ಯಸ್ತಿಕೆ ವಹಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ ಎಂದು ತಿಳಿಸಿದರು. ಹಿರಿಯ ವಕೀಲ ನಾರಿಮನ್ ಸಲಹೆ ಕೇಳಿದ್ದೀರಾ ಎನ್ನುವ ಪ್ರಶ್ನೆಗೆ, ಈಗ ಇರುವ ತಂಡದಲ್ಲಿ ಅವರ ಶಿಷ್ಯರೇ ಇದ್ದಾರೆ, ಸಲಹೆ ಕೇಳಿದ್ದೇವೆ. ಇದರ ಬಗ್ಗೆ ಆ ನಂತರ ಮಾತನಾಡುವೆ ಎಂದರು.

RELATED ARTICLES
- Advertisment -
Google search engine

Most Popular