ಮೈಸೂರು: ಅಭಿವೃದ್ಧಿ ಪ್ರಕಾಶನವತಿಯಿಂದ ಪ.ಮಲ್ಲೇಶ ಅವರ ರಚಿತದ ಬುದ್ಧ ನಾಗಾರ್ಜುನರ ಶೂನ್ಯಯಾನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ನ.೧೮ರ ಬೆ.೧೦.೩೦ಕ್ಕೆ ನಗರದ ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಶೋಧನ ವಿದ್ಯಾರ್ಥಿ ಡಾ.ಹರೀಶ್ ಕುಮಾರ್ ತಿಳಿಸಿದರು.
ಇಂದು ನಗರದ ಜಿಲ್ಲಾ ಪತ್ರಕರ್ತರಭವನದಲ್ಲಿ ಅಯೋಜಿಸಿದ್ದ ಸುದ್ದಿಗೊಷ್ಟಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪುಸ್ತಕ ಲೋಕಾರ್ಪಣೆ ಮಾಡಲಿದ್ದು, ಖ್ಯಾತ ಪತ್ರಕರ್ತ ಜಿ.ಪಿ.ಬಸವರಾಜು ಪುಸ್ತಕ ಕುರಿತು ಮಾತನಾಡಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ನೃಪತುಂಗ ಕನ್ನಡ ವಿಕಾಸ ವಿದ್ಯಾಸಂಸ್ಥೆ ಅಧ್ಯಕ್ಷ ಡಾ.ಯತೀಂದ್ರಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ತಿಮ್ಮಯ್ಯ, ಸವಿತ ಪ. ಮಲ್ಲೇಶ್ ಪಾಲ್ಗೊಳ್ಳಲಿದ್ದಾರೆ ಎಂದರು. ಸುದ್ದಿಗೋಷ್ಟಿಯಲ್ಲಿ ಸಂಸ್ಕೃತಿ ಸುಬ್ರಮಣ್ಯ, ಪುನೀತ್ ಸಂಶೋಧನ ವಿದ್ಯಾರ್ಥಿಗಳಾದ ಶಿವಕುಮಾರ್, ರಾಜೇಶ್, ಪ್ರದೀಪ್, ರವಿಕುಮಾರ್, ಇದ್ದರು.