ಗುಂಡ್ಲುಪೇಟೆ: ತಾಲೂಕಿನ ಕಾಡಂಚಿನ ಗ್ರಾಮದ ಮಗುವಿನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಜಿ.ಆರ್.ಫೌಂಡೇಶನ್ ವತಿಯಿಂದ ಪುಸ್ತಕ ಹಾಗೂ ಪೆನ್‍ಗಳನ್ನು ವಿತರಣೆ ಮಾಡಲಾಯಿತು.
ಜಿ.ಆರ್.ಫೌಂಡೇಶನ್ ಅಧ್ಯಕ್ಷ ಜಗದೀಶ್ ಶಾಲಾ ಮಕ್ಕಳಿಗೆ ಪುಸ್ತಕ ವಿತರಿಸಿ ನಂತರ ಮಾತನಾಡಿ, ಪ್ರಸ್ತುತ ಶಾಲೆಯು ಪ್ರಾರಂಭವಾಗಿರುವ ಹಿನ್ನೆಲೆ ಮಕ್ಕಳು ಮೊದಲ ಹಂತದಲ್ಲೆ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಬೇಕು ಎಂಬ ಉದ್ದೇಶದಿಂದ ಪುಸ್ತಕ ಸೇರಿದಂತೆ ಲೇಖನಿ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ. ಇದನ್ನು ಉತ್ತಮ ರೀತಿಯಲ್ಲಿ ವಿದ್ಯಾರ್ಥಿಗಳು ಬಳಕೆ ಮಾಡಿಕೊಂಡು ತೇರ್ಗಡೆ ಹೊಂದಬೇಕು ಎಂದು ಸಲಹೆ ನೀಡಿದರು.
ಕಾಡಾಂಚಿನ ಗ್ರಾಮಗಳ ಶಾಲೆಗಳಲ್ಲಿ ಇಂದಿಗೂ ಕೂಡ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಇದನ್ನು ಮನಗಂಡು ಸರ್ಕಾರ ಶಾಲೆಗಳಿಗೆ ಮೂಲಭೂತ ಸೌಲಭ್ಯ ನೀಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಜೊತೆಗೆ ಖಾಸಗೀ ಸಂಸ್ಥೆಗಳು ಸಹ ಇದಕ್ಕೆ ಜೋಡಿಸಿ ಶಾಲೆಗಳ ಅಭಿವೃದ್ಧಿಗೆ ಪೂರಕವಾಗಿ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಪ್ರಕಾಶ್, ಕಲ್ಲಿಗೌಡನಹಳ್ಳಿ ಬಸವರಾಜು ಸೇರಿದಂತೆ ಇತರರು ಹಾಜರಿದ್ದರು.