Thursday, April 3, 2025
Google search engine

Homeರಾಜ್ಯವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ: ಪ್ರಕಾಶಕರು, ಮಾರಾಟಗಾರರಿಂದ ಅರ್ಜಿ ಆಹ್ವಾನ

ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ: ಪ್ರಕಾಶಕರು, ಮಾರಾಟಗಾರರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನ ಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ ೨೭ ರಿಂದ ಮಾರ್ಚ್ ೩ರ ವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ನಾಡಿನ ಪ್ರಕಾಶಕರು/ಮಾರಾಟಗರಾರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು, ಇವರಿಂದ ಅಥವಾ ವಿಧಾನ ಸಭೆ ಸಚಿವಾಲಯದ ವೆಬ್ ಸೈಟ್ www.kla.kar.nic.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಮೇಳದಲ್ಲಿ ಭಾಗವಹಿಸುವ ಪ್ರಕಾಶಕರು/ಮಾರಾಟಗಾರರು ಮಳಿಗೆಯೊಂದಕ್ಕೆ ರೂ.೧,೦೦೦/-ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸುವುದು.

ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ೨೦೨೫ ನೇ ಫೆಬ್ರವರಿ ೧೨ ರಂದು ಸಂಜೆ ೫.೦೦ ಗಂಟೆಯೊಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರಿಗೆ ಸಲ್ಲಿಸಬಹುದು ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳಾದ ಶ್ರೀಮತಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

RELATED ARTICLES
- Advertisment -
Google search engine

Most Popular